ಬೆಂಗಳೂರು-
ಸ್ಯಾಂಡಲ್‍ವುಡ್ ನ ಹಿರಿಯ ನಟ  ರಾಘವೇಂದ್ರ ರಾಜಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗುವ ಸಾದ್ಯತೆ ಇದೆ.

ಕಳೆದ ಎರಡು ದಿನಗಳ ಹಿಂದ ಶೂಟಿಂಗ್ ಸಮಯದಲ್ಲಿ ತುಸು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ‌ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.  ಶೂಟಿಂಗ್ ವೇಳೆ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ  ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ರಾಘಣ್ಣ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಚೇತರಿಕೆ ಕಂಡು ಬಂದಿದೆ. ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ ಅಂದಿದ್ದಾರೆ.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply