ರಾಹುಲ್ ಗಾಂಧಿಯವರು ಕುಮಾರಸ್ವಾಮಿ ಕೈಕಾಲು ಹಿಡಿದು ಮುಖ್ಯಮಂತ್ರಿ ಮಾಡಿದ್ದರು..!?

0

ಮಂಗಳೂರು- ಯಡಿಯೂರಪ್ಪರ ಬಳಿಕ ರಾಜ್ಯ ಬಿಜೆಪಿಯಲ್ಲಿ ಸಮರ್ಥ ನಾಯಕತ್ವದ ಕೊರತೆ ಇದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ಕಟೀಲ್ ಮಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇಲ್ಲ. ನಮ್ಮ ಸರ್ವ ಸಮ್ಮತಿಯ ನಾಯಕ ಬಿ.ಎಸ್.ಯಡಿಯೂರಪ್ಪ. ಸುದೀರ್ಘ ಹೋರಾಟದ ಮೂಲಕ ಯಡಿಯೂರಪ್ಪ ಈಗ ಅತಿ ಎತ್ತರದ ಸ್ಥಾನಕ್ಕೆ ಬಂದಿದ್ದಾರೆ. ಯಡಿಯೂರಪ್ಪ ಪಕ್ಷಾಂತರ ಮಾಡಿ, ಯಾರದ್ದೋ ಕಾಲು ಹಿಡಿದು ಮುಖ್ಯಮಂತ್ರಿಯಾಗಿಲ್ಲ. ಸಿದ್ದರಾಮಯ್ಯನವರು ಅವರ ಬಗ್ಗೆ ಯೋಚಿಸಬೇಕಿತ್ತು. ಅವರು ಮುಂಚೆ ಎಲ್ಲಿದ್ರು, ಯಾರು ಅವರ ಗುರು ಆಗಿದ್ರು, ಕಾಂಗ್ರೆಸ್ ಗೆ ಬೈದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬಂದು ಮುಖ್ಯಮಂತ್ರಿ ಆಗಿರುವುದನ್ನು ಜಗತ್ತು ನೋಡಿದೆ ಎಂದರು. ಕಾಂಗ್ರೆಸ್ ನಲ್ಲೇ ನಾಯಕತ್ವದ ಕೊರತೆ ಇದೆ. ಅವತ್ತು ಸಮ್ಮಿಶ್ರ ಸರ್ಕಾರ ರಚನೆ ಮಾಡಿದಾಗ ರಾಹುಲ್ ಗಾಂಧಿಯವರು ಕುಮಾರಸ್ವಾಮಿ ಕೈಕಾಲು ಹಿಡಿದು ಮುಖ್ಯಮಂತ್ರಿ ಮಾಡಿದ್ದರು. ಅಂದರೆ ಕಾಂಗ್ರೆಸ್ ನಲ್ಲಿ ಸಮರ್ಥ ನಾಯಕ ಇಲ್ಲ ಅಂತಾ ಸೋನಿಯಾ ಗಾಂಧಿ ತೀರ್ಮಾನ ಅಲ್ವಾ ಅದು..? ಸಿದ್ದರಾಮಯ್ಯ ಅವರ ಪಕ್ಷವನ್ನು ಮೊದಲು ನೋಡುವುದು ಒಳ್ಳೆಯದು.

ಸೋನಿಯಾ ಗಾಂಧಿಯವರಿಗೆ ಗೊತ್ತಿದೆ, ಸಿದ್ದರಾಮಯ್ಯ ಸಮರ್ಥ ನಾಯಕ ಅಲ್ಲ. ಕಾಂಗ್ರೆಸ್ ನಲ್ಲಿ ಸಮರ್ಥ ನಾಯಕ ಇಲ್ಲ ಅಂತಾ ಗೊತ್ತಾಗಿ ಕುಮಾರಸ್ವಾಮಿಯನ್ನು ಅವತ್ತು ಮುಖ್ಯಮಂತ್ರಿ ಮಾಡಿದ್ದು ಅಂದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply