ತರಕಾರಿ ಕಾಲಿನಿಂದ ಒದ್ದು ಧರ್ಪ ಮೆರೆದ ಪಿಎಸ್ಐ ಅಮಾನತ್ತು.

0

ರಾಯಚೂರು

ತರಕಾರಿ ಮಾರಾಟ ಮಾಡುತ್ತಿದ್ದ ರೈತರ ತರಕಾರಿಯನ್ನು ಕಾಲಿನಿಂದ ಒದ್ದು ಧರ್ಪ ಮೆರೆದಿದ್ದ ಪಿಎಸ್ಐ ಅವರನ್ನು ಅಮಾನತ್ತು ಮಾಡಲಾಗಿದೆ. ಹೊಟ್ಟೆ ಪಾಡಿಗಾಗಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಬೀದಿಬದಿಯ ವ್ಯಾಪಾರಿಗಳ ಮೇಲೆ ರಾಯಚೂರಿನ ಸದರ್ ಬಜಾರ್ ಪೊಲೀಸ್ ಠಾಣೆಯ, ದರ್ಪ ತೋರಿಸಿದ್ದ ಪಿಎಸ್‍ಐ ಪಿ ಎಸ್ ಐ ಅಝಮ್ ಅವರನ್ನು ಅಮಾನತ್ತು ಮಾಡಲಾಗಿದೆ.

ವೀಕೆಂಡ್ ಕರ್ಫ್ಯೂ ಹಿನ್ನೆಲೆ ನಗರದಲ್ಲಿ ಎಲ್ಲಾ ವ್ಯಾಪಾರ ವಹಿವಾಟುಗಳು ಬಂದ್ ಮಾಡಲಾಗಿತ್ತು. ನಗರದ ಚಂದ್ರಮೌಳೇಶ್ವರ ವೃತ್ತದ ಬಳಿ ಅಲ್ಲಲ್ಲಿ ವ್ಯಾಪಾರ ನಡೆಸುತ್ತಿದ್ದ, ತರಕಾರಿ ವ್ಯಾಪಾರಿಗಳನ್ನ ಪೊಲೀಸರು ಜಾಗ ಖಾಲಿ ಮಾಡಿಸುತ್ತಿದ್ದರು. ಈ ವೇಳೆ ಏಕಾಏಕಿ ಬಂದ ಪಿಎಸ್‍ಐ ಅಝಮ್ ತರಕಾರಿ ಹಾಗೂ ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ಮೆರೆದಿದ್ದರು. ಇದನ್ನು ಅಲ್ಲಿದ ಕೆಲವರು ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದರು. ಈ ಹಿನ್ನಲೆಯಲ್ಲಿ ಪೊಲೀಸ್ ಧರ್ಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು , ಇನ್ನು  ವೀಕೆಂಡ್ ಕರ್ಫ್ಯೂ ನೆಪದಲ್ಲಿ ಬಡ ವ್ಯಾಪಾರಿಗಳ ಜೊತೆ ಒಬ್ಬ ಜವಾಬ್ದಾರಿಯುತ ಅಧಿಕಾರಿಯಾಗಿ ಅಸಭ್ಯ ವರ್ತನೆ ತೋರಿದ ಅಝಮ್‍ನನ್ನು ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರಕಾಶ್ ನಿಕಮ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply