ಕಲ್ಯಾಣ ಕರ್ಣಾಟಕ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ.

0

ಬೆಂಗಳೂರು  – ಕಲ್ಯಾಣ ಕರ್ನಾಟಕ,ಸೇರಿದಂತೆ  ಕರಾವಳಿಯ ವಿವಿಧ ಜಿಲ್ಲೆಗಳಲ್ಲಿ ನಿನ್ನೆಯು ಉತ್ತಮ ಮಳೆಯಾಗಿದ್ದು, ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ಬೀದರ್ ಕಲಬುರಗಿ ಬಳ್ಳಾರಿ ಸೇರಿದಂತೆ ಕಲ್ಯಾಣ ಕರ್ಣಾಟಕದ ಬಹುತೇಕ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ‌‌. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ತಡೆಗೋಡೆ ಉರುಳಿ ಮಗು ಸೇರಿ ಇಬ್ಬರಿಗೆ ಪೆಟ್ಟಾಗಿದೆ.

ಕಲಬುರ್ಗಿ ಜಿಲ್ಲೆಯಲ್ಲಿ ಸೇಡಂ, ಚಿಂಚೋಳಿ, ಕಮಲಾಪುರ ಮತ್ತು ಯಡ್ರಾಮಿ ತಾಲ್ಲೂಕು ಹಾಗೂ ಬೀದರ್ ತಾಲ್ಲೂಕು ಸೇರಿ ಜಿಲ್ಲೆಯ ಔರಾದ್, ಭಾಲ್ಕಿ, ಹುಮನಾಬಾದ್ ತಾಲ್ಲೂಕಿನ ಕೆಲ ಕಡೆ ಭಾರಿ ಮಳೆಯಾಗಿದೆ.

ಬೀದರ್‌ನಲ್ಲಿ ಮಾಂಜ್ರಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹಳ್ಳಕೊಳ್ಳಗಳು ಭರ್ತಿಯಾಗಿವೆ. ಬೀದರ್ ತಾಲ್ಲೂಕಿನ ಕಮಠಾಣ, ಬಗದಲ್‌ನಲ್ಲಿ ಕಬ್ಬು ಬೆಳೆ ನೆಲಕ್ಕುರುಳಿದೆ. ಸಂತಪುರ ನಡುವೆ ರಸ್ತೆಯು ಕೊಚ್ಚಿ ಹೋಗಿದ್ದು, ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply