ಮಂಗಳೂರಿನಲ್ಲಿ ಮಳೆಯ ಅಬ್ಬರ.

0

ಮಂಗಳೂರು –  ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ತನ್ನ ಅಬ್ಬರ ತೋರಿಸಿದ್ದಾನೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತು ಮಳೆ ಅಬ್ಬರ ಜೋರಾಗಿತ್ತು.‌ ಹವಾಮಾನ ಇಲಾಖೆಯು ಇಂದು ಅರೆಂಜ್ ಅಲರ್ಟ್ ಘೋಷಿಸಿತ್ತು.‌ ಅದರಂತೆ ಇಂದು ಬೆಳಗ್ಗೆಯಿಂದ ಸತತವಾಗಿ ಮಳೆ ಸುರಿಯಿತು.‌

ಮಂಗಳೂರು ನಗರ ಸೇರಿದಂತೆ ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ, ಸುಬ್ರಹ್ಮಣ್ಯ, ಮೂಡಬಿದ್ರೆ, ಬೆಳ್ತಂಗಡಿ ತಾಲೂಕಿನಲ್ಲಿ ಮಳೆ ಸುರಿಯಿತು. ಮಧ್ಯಾಹ್ನ ಆಗ್ತಿದ್ದಂತೆ ಮಳೆ ಅಬ್ಬರ ಕಡಿಮೆಯಾಯ್ತು. ಇನ್ನು ಮುಂದಿನ ಮೂರು ದಿನಗಳ ಕಾಲ ಮಲೆನಾಡಿನಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply