ರಮೇಶ್ ಜಾರಕಿಹೊಳಿ ಅವರ ರಾಸ ಲೀಲೆ ಸಿಡಿ ಈಗ ಬಿಡುಗಡೆಯಾಗಿದ್ದು, ಕೆಲಸ ಕೇಳಿಕೊಂಡು ಬಂದ ಮಹಿಳೆಯನ್ನು ಲೈಂಗಿಕ ಕ್ರೀಯಗೆ ಬಳಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.  ಹಿನ್ನೆಲೆಯಲ್ಲಿ ಇಂದು ನಾಗರಿಕ ಹಕ್ಕು ಹೋರಾಟ ಸಮೀತಿ ಅಧ್ಯಕ್ಷ  ದಿನೇಶ್ ಕಲ್ಲಹಳ್ಳಿ ಎಂಬುವವರು ದೂರು ನೀಡಿದ್ದಾರೆ.
ಅಧಿಕಾರ ದುರ್ಬಳಕೆ ಮಾಡಿ ಲೈಂಗಿಕ ತೃಷೆ ತೀರಿಸಿಕೊಳ್ಳುತ್ತಿದ್ದ ಸರ್ಕಾರದ ಪ್ರಭಾವಿ  ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ದೂರು ನೀಡಲಾಗಿದೆ.

ದೂರು ನೀಡಿದ ಬಳಿಕ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಪ್ರಭಾವಿ ನಾಯಕರ ವಿರುದ್ಧ ದೂರು ನೀಡುತ್ತಿದ್ದೇನೆ. ಸಂತೃಸ್ತೆ ಮಹಿಳೆಯ ಹೆಸರು ಬಹಿರಂಗ ಪಡಿಸುವುದಿಲ್ಲ. ಕಾರಣ ಅವರಿಗೆ ಜೀವ ಬೆದರಿಕೆ ಇದೆ ಎಂದಿದ್ದಾರೆ.  ಸಂತ್ರಸ್ತೆಗೆ ಬೆದರಿಕೆ ಇರುವ ಕಾರಣ ಮಹಿಳೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಡ್ರೋನ್ ಕ್ಯಾಮೆರಾಗಳ ಮೂಲಕ ಕರ್ನಾಟಕದ ಡ್ಯಾಂ ಗಳನ್ನು ಚಿತ್ರೀಕರಣ ಮಾಡಲು ಮಹಿಳೆ ಬಯಸಿದ್ದರು. ಆದರೆ ಈ ಮಹಿಳೆಯನ್ನು ರಮೇಶ್‌ ಜಾರಕಿಹೊಳಿ ತನ್ನ ಕಾಮ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ರಾಸಲೀಲೆಯ ವೀಡಿಯೊ ಚಿತ್ರೀಕರಣವನ್ನು ಸಚಿವ ರಮೇಶ್‌ ಜಾರಕಿಹೊಳಿ ದೆಹಲಿಯ ಕರ್ನಾಟಕ ಭವನದಲ್ಲಿ ಚಿತ್ರೀಕರಿಸಿದ್ದಾರೆ. ಅಲ್ಲಿ ಅವರಿಗೆ ಟೆಂಡರ್ ಕೊಡಿಸುವುದಾಗಿ ಕರೆದುಕೊಂಡು ಬಂದು ಅವರನ್ನು ಲೈಂಗಿಕವಾಗಿ ಭಳಸಿಕೊಳ್ಳಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply