ಬೆಳಗಾವಿ-ಗೋಕಾಕ್‍ನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರ ಹುಚ್ಚಾಟ ಮಿತಿಮೀರಿದೆ. ಕಳೆದ ಎರಡು ದಿನಗಳಿಂದ ಬೆಳಗಾವಿಯ ಗೋಕಾಕ್ ಬೂದಿ ಮುಚ್ಚಿದ ಕೆಂಡದ್ದಂತೆ ಇದ್ದು, ಇಂದು ಗೋಕಾಕ್ ನಗರದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ಜೋರಾಗಿದೆ‌. ಬೆಳಿಗ್ಗೆ ಇಂದ ಆರಂಭವಾದ ಪ್ರತಿಭಟನೆ ಕಾವು ಪಡೆದಿದ್ದು, ಪ್ರತಿಭಟನೆ ವೇಳೆಯಲ್ಲಿ  ವ್ಯಕ್ತಿಯೊಬ್ಬ ಬೆಂಕಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಗಣಪತಿ ರಜಪೂತ (55) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಗೋಕಾಕ್ ನಗರದ ಚಿನವಾರ ಗಲ್ಲಿಯ ನಿವಾಸಿಯಾಗಿರುವ ಈತನ ಸ್ಥಿತಿ ಸದ್ಯ ಗಂಭೀರವಾಗಿದೆ.  ಸಾಹುಕಾರನ ರಾಸಲೀಲೆ ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ ಅಂತ ಅವರ ಅಭಿಮಾನಿಗಳು ಸಿಡಿ ಹೊರಬಂದಾಗಿನಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply