ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯ ಪ್ರವಾಸ

0

ಮಂಗಳೂರು

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಜುಲೈ 22ರಿಂದ ರಾಜ್ಯ ಪ್ರವಾಸ ನಡೆಸಲಿದ್ದು, ಜುಲೈ 23 ರಂದು ಮಂಗಳೂರಿಗ ಆಗಮಿಸಿ ಐದು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವಾರಗಳ ಕಾಲ ರಾಜ್ಯ ಪ್ರವಾಸ ನಡೆಸಲಿರುವ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿಯಲ್ಲಿ ಸಭೆ ನಡೆಸುವ ಮೂಲಕ 25 ಜಿಲ್ಲೆಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದರು.

ಇನ್ನು ಹಾಲಿ ಮಾಜಿ ಶಾಸಕರು, ಸಂಸದರ ಸಹಿತ ಪ್ರಮುಖ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷ ಸಂಘಟನೆ ನಿಟ್ಟಿನಲ್ಲಿ ಈ ಸರಣಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಸಲೀಂ ತಿಳಿಸಿದರು. ಪ್ರಮುಖವಾಗಿ ಮುಂಬರುವ ಉಪಚುನಾವಣೆ, ವಿಧಾನಪರಿಷತ್ ಚುನಾವಣೆ, ಜಿಲ್ಲಾ ಪಂಚಾಯತು ಚುನಾವಣೆಗಳು ಅಲ್ಲದೆ ಸರಕಾರದ ವೈಫಲ್ಯ, ಜನರು ಎದುರಿಸುತ್ತಿರುವ ಸಂಕಷ್ಟ ಇತ್ಯಾದಿಗಳ ಬಗ್ಗೆ ಚರ್ಚೆ ನಡೆಯಲಿದೆ ಅಂದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply