ಕ್ಷುಲ್ಲಕ ಕಾರಣಕ್ಕೆ ಬಿತ್ತು ಹೆಣ

0

ರಾಯಚೂರು- ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ತಾಲೂಕಿನ ಮರ್ಚೇಡ್ ಗ್ರಾಮದಲ್ಲಿ ನಡೆದಿದೆ. ತಾಯಪ್ಪ ಆಂಜಿನೇಯ್ಯ(26) ಹತ್ಯೆ ವ್ಯಕ್ತಿಯೆಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಘಟನೆ ಸಂಭವಿಸಿದೆ. ಗ್ರಾಮದಲ್ಲಿರುವ ದೇವಾಲಯ ಮುಂದೆ ವ್ಯಕ್ತಿಯನ್ನ ಹತ್ಯೆ ಮಾಡಲಾಗಿದ್ದು, ಘಟನೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೊಲೀಸ್ ರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹವನ್ನ ರಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ಆತಂಕ ಛಾಯೆ ಮೂಡಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply