ನಕಲಿ ಆಡಿಯೋ ಸೃಷ್ಟಿಸಿದವರ ಬಂಧನಕ್ಕೆ ಆಗ್ರಹ

0

ಮಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ  ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಇದೊಂದು ನಕಲಿ ಎಂದು ಮಂಗಳೂರು ನಗರದ ಪೊಲೀಸ್ ಕಮಿಷನರ್ ಗೆ ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದಾರೆ.

ಇದೊಂದು ನಕಲಿ ಆಡಿಯೋ ಎಂದು ಆರೋಪಿಸಿ ತನಿಖೆ ನಡೆಸುವಂತೆ ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ತಂಡ ಮನವಿ ಸಲ್ಲಿಸಿತು. ವೈರಲ್ ಆದ ಆಡಿಯೋ ನಕಲಿ ಎಂದು ಆರೋಪಿಸಿ ಸೂಕ್ತ ತನಿಖೆಗೆ ಒತ್ತಾಯಿಸಿದ ನಿಯೋಗ ವೈರಲ್ ಮಾಡಿದವರು ಮತ್ತು ನಕಲಿ ಆಡಿಯೋ ಸೃಷ್ಟಿಸಿದವರ ಬಂಧನಕ್ಕೆ ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್  ಅವರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply