ಧಾರ್ಮಿಕ ಕ್ಷೇತ್ರಗಳ ಭೇಟಿಗೆ ನಿರ್ಬಂಧ..!

0

ಮಂಗಳೂರು  – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ದೇವಸ್ಥಾನಗಳಿಗೆ ಹೊರ ಜಿಲ್ಲೆಗಳಿಂದ ಆಗಮಿಸುತ್ತಿರುವ ಭಕ್ತರನ್ನು ಗುಂಡ್ಯ ಚೆಕ್’ಪೋಸ್ಟ್ ನಿಂದಲೇ ವಾಪಸ್ ಕಳುಹಿಸಲಾಗುತ್ತಿದೆ.

ಅಗತ್ಯ ದಾಖಲೆಗಳನ್ನು ಹೊಂದಿದವರನ್ನು ಮಾತ್ರ ಜಿಲ್ಲೆಯ ಒಳಗೆ  ಬಿಡಲಾಗುತ್ತಿದೆ. ಅತ್ತ ಶಿರಾಡಿ ಘಾಟ್ ಮೂಲಕ ಜಿಲ್ಲೆಯ ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ಪುಣ್ಯಕ್ಷೇತ್ರಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ನಿನ್ನೆ ಒಂದೇ ದಿನ ತೀರ್ಥಯಾತ್ರೆಗೆ ಆಗಮಿಸಿದ್ದ ಬರೋಬ್ಬರಿ 69 ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ. ಮುಂದಿನ ಎರಡು ವಾರಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲಾಗುವುದಿಲ್ಲ.

ಅಂತರ್ ಜಿಲ್ಲಾ ಗಡಿಗಳಲ್ಲಿ ಯಾತ್ರಾರ್ಥಿಗಳನ್ನು ಬಿಡಬಾರದೆಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಜಿಲ್ಲೆಯ ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ರಾತ್ರಿ ಹಗಲು ಪೊಲೀಸ್ ಅಧಿಕಾರಿಗಳು ಕರ್ತವ್ಯದಲ್ಲಿ ನಿರತರಾಗಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply