ಬೆಂಗಳೂರು ‌-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರು ಇಂದು ಸರಣಿ ಟ್ವೀಟ್ ಗಳನ್ನು ಮಾಡಿದ್ದು, ಒಂದೊಂದು ಟ್ವೀಟ್ ಬಿಜೆಪಿ ನಾಯಕರಿಗೆ ಇರುಸು ಮುರುಸು ತಂದಿದೆ. ಉಡುಪಿ ಮಂಗಳೂರು ಭಾಗದಲ್ಲಿ ಪ್ರತಿಭಟನೆ ಆರಂಭ ಮಾಡಿರುವ ಕಾಂಗ್ರಸ್ ಮುಖಂಡರು ಬಿಜೆಪಿ ವಿರುದ್ಧ ತಿರುಗಿ ಬಿದಿದ್ದಾರೆ‌. ಇಂದು ಮುಂಜಾನೆಯ ಇಂದ ಸರಣಿ ಟ್ವೀಟ್ ಮಾಡಿದ್ದಾರೆ.

ಆರ್.ಎಸ್.ಎಸ್ ದೇಶಪ್ರೇಮಿ ಸಂಘಟನೆಯಲ್ಲ, ಅದೊಂದು ಕೋಮು ಸಂಘಟನೆ. ತನ್ನನ್ನು ತಾನು ದೇಶಪ್ರೇಮಿ ಸಂಘಟನೆ ಎಂದು ಜನರಿಗೆ ಸುಳ್ಳು ಹೇಳುತ್ತಿದೆ. ಅದು ದೇಶಪ್ರೇಮಿ ಸಂಘಟನೆ ಎಂಬುದು ನಿಜವೇ ಆಗಿದ್ದರೆ ಸ್ವಾತಂತ್ರ್ಯ ಚಳವಳಿಗೆ ತನ್ನ ಕೊಡುಗೆ ಏನು ಎಂದು ಹೇಳಲಿ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಎಸ್‌ಡಿಪಿಐ ಮತ್ತು ಪಿ.ಎಫ್.ಐ ಕೈವಾಡವಿದೆ ಅಂತ ಮುಖ್ಯಮಂತ್ರಿಗಳಾದಿಯಾಗಿ ಹಲವು ಸಚಿವರು ಬಹಿರಂಗ ಹೇಳಿಕೆ ನೀಡಿದ್ದಾರೆ. ಈ ವಿಚಾರ ಸತ್ಯವಾಗಿದ್ದು, ಸರ್ಕಾರದ ಬಳಿ ಪುರಾವೆಗಳಿದ್ದರೆ ಆ ಸಂಘಟನೆಗಳನ್ನು ನಿಷೇಧಿಸಬೇಕಿತ್ತು. ಇದುವರೆಗೆ ಯಾಕೆ ನಿಷೇಧಿಸಿಲ್ಲ? ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ…

 

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply