ಕೋಲಾರ- ಕೋಲಾರದ ಸರ್ವಜ್ಞ  ಪಾರ್ಕ್ ನಲ್ಲಿ ವಾಯು ವಿಹಾರಕ್ಕೆ ಬಂದ್ ಜನರಿಗೆ ಶಾಕ್ ಒಂದು ಕಾದಿತ್ತು. ಕಾರಣ ಕಳೆದ ಹಲವಾರು ವರ್ಷಗಳಿಂದ ಪಾರ್ಕ್ ನಲ್ಲಿ ಬೆಳೆದ್ದ ಗಂಧದ ಮರಗಳನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಕೋಲಾರ ನಗರದ ಸರ್ವಜ್ಞ ಪಾರ್ಕ್ ನಲ್ಲಿ ಈ ಒಂದು ಘಟನೆ ನಡೆದಿದ್ದು, ಸುಮಾರು ಹದಿನೈದು ವರ್ಷಗಳಷ್ಟು ಹಳೆಯದಾದ ಲಕ್ಷಾಂತರ ರೂಪಯಿ ಬೆಲೆಬಾಳುವ ಎರಡು ದೊಡ್ಡ ಗಂಧದ ಮರಗಳನ್ನು ಕಡಿದುಕೊಂಡು ಹೋಗಿದ್ದಾರೆ. ಬೆಳಗಿನ ಜಾವ ವಾಯುವಿಹಾರಕ್ಕೆ ಜನ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು ಕೂಡಲೇ ಸ್ಥಳೀಯರು, ಕೋಲಾರ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡು ವಿಚಾರಣೆಗೆ ಮುಂದಾಗಿದ್ದಾರೆ..

 

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply