ಬೆಳಗಾವಿ- ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಹೇಳಿಕೆ ನೀಡಿದ ಮಹಾರಾಷ್ಟ್ರ ಸಿ ಎಮ್ ಗೆ ರಾಜ್ಯ ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಸರಿಯಾಗಿಯೇ ತಿರುಗೇಟು ನೀಡಿದ್ದಾರೆ. ಬೆಳಗಾವಿಯನ್ನು ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ ಎಂದಿದ್ದ ಅಲ್ಲಿನ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಬೊಮ್ಮಾಯಿ ಖಡಕ್ ತಿರುಗೇಟು ನೀಡಿದ್ದಾರೆ. ಮಹಾರಾಷ್ಟ್ರದ ಅತೀ ಹೆಚ್ಚು ಕನ್ನಡ ಮಾತನಾಡುವ ಪ್ರದೇಶಗಳಾದ ಸಾಂಗ್ಲಿ, ಸೊಲ್ಲಾಪುರಗಳನ್ನು ಕರ್ನಾಟಕಕ್ಕೆ ಸೇರಿಕೊಳ್ಳಲು ಸರಕಾರ ಚಿಂತನೆ ನಡೆಸಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಕ ರೀತಿಯಲ್ಲಿ ಮಾತನಾಡುತ್ತಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಎಲ್ಲರೂ ಮಹಾಜನ್ ವರದಿಯೇ ಅಂತಿಮ ಎಂದು ಹೇಳುತ್ತಿದ್ದಾರೆ. ಆದರೆ ಮಹಾಜನ್ ವರದಿ ಜಾರಿಗೆ ಬಂದರೂ ಕರ್ನಾಟಕಕ್ಕೆ ನಷ್ಟವೇ. ಹಾಗಾಗಿ ಕರ್ನಾಟಕ ಸಾಂಗ್ಲಿ ಮತ್ತು ಸೊಲ್ಲಾಪುರ ಸೇರಿದಂತೆ ಕನ್ನಡ ಮಾತನಾಡುವ ಪ್ರದೇಶಗಳನ್ನು ಕೇಳುವುದೇ ಉತ್ತಮ ಎಂದಿದ್ದಾರೆ…