ಕೋವಿಡ್ 3ನೇ ಅಲೆ ಎದುರಿಸಲು ಸಿದ್ಧರಾಗಿ ಶಶಿಕಲಾ ಜೊಲ್ಲೆ ಸೂಚನೆ

0

ವಿಜಯಪುರ  – ಕೋವಿಡ್ 3ನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಬೇಕಾಗುವ  ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಚಿವೆ ಶಶಿಕಾಲಾ ಜೊಲ್ಲೆ  ಸೂಚನೆ ನೀಡಿದ್ದಾರೆ.

ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ 19 ರೋಗ ನಿಯಂತ್ರಣ ಕ್ರಮಗಳ ಪರಿಶೀಲನಾ ಸಭೆ ನಡೆಸಿದ ಅವರು,  ಕೋವಿಡ 3 ನೇ ಅಲೆ ಅಂಗವಾಗಿ ಹೆಚ್ಚಿನ ಮಕ್ಕಳು ಕೋವಿಡದಿಂದ ಬಾಧಿತ ವಾಗುವ ಸಾಧ್ಯತೆ ಇದೆ. ಹೀಗಾಗಿ,  ಜಿಲ್ಲಾ ಆಸ್ಪತ್ರೆ ,ತಾಲೂಕ ಆಸ್ಪತ್ರೆ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಬೆಡ್ ಗಳ ವ್ಯವಸ್ಥೆ, ಆಕ್ಸಿಜನ್,ವೆಂಟಿಲೇಟರ್ ಸೇರಿದಂತೆ  ಸಕಲ ಸಿದ್ಧತೆಗಳೊಂದಿಗೆ ಸನ್ನದ್ಧ  ಗೊಳ್ಳುವ ಜೊತೆಗೆ ಯೋಜನೆ ರೂಪಿಸಲು ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳ ವ್ಯಾಪ್ತಿಯಲ್ಲಿಯೂ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಎನ್ ಐ. ಸಿ .ಯು – ಪಿ .ಐ. ಸಿ .ಯು ಸೌಲಭ್ಯಗಳೊಂದಿಗೆ ಸಮನ್ವಯ ಸಮಿತಿಯನ್ನು ರೂಪಿಸಿ ಕೋವಿಡ್ ಮಕ್ಕಳ ನಿರ್ವಹಣಾ ಕ್ರಿಯಾ ಯೋಜನೆಯನ್ನು ರೂಪಿಸಿ ಮುಂದಿನ ದಿನಗಳಲ್ಲಿ ಸನ್ನದ್ಧ  ಗೊಳ್ಳುವಂತೆ  ಸೂಚನೆ ನೀಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply