ಬಾಗಲಕೋಟೆ: ಪ್ರಸಕ್ತ ಜಾಗತಿ ಮಟ್ಟದಲ್ಲಿ ಹರಡುತ್ತಿರುವ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಡಿಸೆಂಬರ 31 ವರೆಗೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತಾಧಿಗಳ ದರ್ಶನಕ್ಕೆ ನಿರ್ಭಂಧ ವಿಧಿಸಲಾಗಿದೆ. ಪ್ರಸಕ್ತ ಸಾಲಿನ ದೇವಿಯ ಹೊಸ್ತಲ ಹುಣ್ಣಿಮೆ ಜಾತ್ರೆಯು ಡಿಸೆಂಬರ 30 ರಂದು ಜರುಗಲಿದ್ದು, ಸದರಿ ಕಾರ್ಯಕ್ರಮವನ್ನು ಸಾರ್ವಜನಿಕ ಭಕ್ತಾಧಿಗಳ ಪಾಲ್ಗೊಳ್ಳುವಿಕೆಯನ್ನು ನಿರ್ಭಂಧಿಸಿ ಈ ಬಾರಿ ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲು ನಿರ್ಣಯಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply