ಕಲಬುರಗಿ-ಕೋವಿಡ್-19 ಮುನ್ನೆಚ್ಚರಿಕೆ ಕ್ರಮದೊಂದಿಗೆ ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ತರಗತಿಯನ್ನು ಜನವರಿ 1 ರಿಂದ ಪ್ರಾರಂಭಿಸಲಾಗುವುದು ಎಂದು ಕಲಬುರಗಿ ಜಿಲ್ಲಾ CEO ಡಾ.ಪಿ. ರಾಜಾ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಯವರು ನೀಡಿರುವ ಮಾರ್ಗಸೂಚಿಗಳ ಅನುಸಾರವೇ ಶಾಲೆಗಳನ್ನು ಪುನರ್ ಪ್ರಾರಂಭಿಸಲಾಗುತ್ತಿದೆ ಎಂದಿದ್ದಾರೆ.

ಜನವರಿ 1 ರಿಂದ 10 ಮತ್ತು 12ನೇ ತರಗತಿ ಪ್ರಾರಂಭಿಸಿ ತದನಂತರ ಈ ತರಗತಿಗಳ ಅನುಭವದ ಆಧಾರದ ಮೇಲೆ ಜನವರಿ 15 ರಿಂದ 11ನೇ ತರಗತಿ ಪ್ರಾರಂಭೋತ್ಸವದ ಬಗ್ಗೆ ನಿರ್ಧರಿಸಲಾಗುವುದು. 10ನೇ ತರಗತಿಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ವರೆಗೆ 45 ನಿಮಿಷ ಅವಧಿಯ ಮೂರು ಅವಧಿಯಲ್ಲಿ ವಾರದ 6 ದಿನಗಳಲ್ಲಿ ತರಗತಿ ನಡೆಸಲಾಗುವುದು ಎಂದು ಡಾ.ಪಿ.ರಾಜಾ ತಿಳಿಸಿದರು…

About Author

Priya Bot

Leave A Reply