ಮೈಸೂರು – ಹೆಣ್ಣು ನಾಯಿಗೆ‌ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ, ವಿಕೃತ ಕಾಮುಕನ ವಿರುದ್ದ ಎಫ್.ಐ.ಆರ್ ದಾಖಲಾಗಿದೆ. ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರಿನ ನಿವಾಸಿ ಸೋಮಶೇಖರ್ ವಿರುದ್ದ ಪ್ರಕರಣ ದಾಖಲಾಗಿದೆ.

ಫೀಪಲ್ ಪಾರ್ ಅನಿಮಲ್ ಸಂಸ್ಥೆ ಈತನ ವಿರುದ್ದ ದೂರು ನೀಡಿದ್ದು,‌ ಈ ಹಿನ್ನೆಲೆಯಲ್ಲಿ ವಿವಿಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೈಸೂರಿನ ಗಣೇಶ ದೇವಸ್ಥಾನದ ಹಿಂಭಾಗದಲ್ಲಿ ರಾತ್ರಿ ವೇಳೆಯಲ್ಲಿ ಹೆಣ್ಣುನಾಯಿಗೆ ಲೈಂಗಿಕ ಕಿರುಕುಳ ನೀಡಿದ್ದ ಸೋಮಶೇಖರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಸೋಮಶೇಖರ್ ನಾಯಿಗೆ ಲೈಂಗಿಕ ಕಿರುಕುಳ ನೀಡುವುದನ್ನು ಸ್ಥಳೀಯರು ಮೊಬೈಲ್ ‌ನಲ್ಲಿ ಚಿತ್ರಕರಣ ಮಾಡಿದ್ದು. ಮೊಬೈಲ್ ವಿಡಿಯೋ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ವಿರುದ್ದ ಐಪಿಸಿ ಸೆಕ್ಷನ್​ 1860 (ಯು /ಎಸ್ -377: ಪ್ರಾಣಿಗಳ ಜತೆ ಲೈಂಗಿಕ ಕ್ರಿಯೆ ನಡೆಸುವುದು) ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಮತ್ತು 1960 ( ಯು/ಇಎಸ್​-11(1)(ಎ)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

About Author

Priya Bot

Leave A Reply