ಗನ್ ತೋರಿಸಿ ಕಳ್ಳತನಕ್ಕೆ ಯತ್ನ

0

ಗದಗ-  ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿ ಹಾಡುಹಗಲೇ ಬಾಗಿಲು ಒಡೆದು ಕಳ್ಳತನಕ್ಕೆ ಮುಂದಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಈಶ್ವರ ನಗರದಲ್ಲಿ ನಡೆದಿದೆ. ರಾಮಣ್ಣ ಎಂಬುವರ ಮನೆಯಲ್ಲಿ ಜಯಶ್ರಿ ಮತ್ತಿಕಟ್ಟಿ ಎಂಬುವರು ಬಾಡಿಗೆ ಇದ್ದರು. ಅವರ ಕುಟುಂಬಸ್ಥರು ಒಟ್ಟಾಗಿ ಹಾವೇರಿ ಜಿಲ್ಲೆಯ ಶಿಗ್ಗಾಂವ ಗೆ ಹೋಗಿದ್ದಾರೆ.

ಅದನ್ನ ಗಮನಿಸಿದ ಖದೀಮರು ಮನೆಗೆ ನುಗ್ಗಿ ದರೋಡೆಗೆ ಮುಂದಾಗಿದ್ದಾರೆ. ಜೋರಾದ ಶಬ್ಧ ಕೇಳಿ ಮನೆ ಮಾಲಿಕ ರಾಮಣ್ಣ ಬಂದು ನೋಡಿದ್ದಾನೆ. ಬಾಗಿಲು ಮುರಿದಿರುವುದನ್ನು ಗಮನಿಸಿ ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ರಿವಾಲ್ವಾರ್ ಹಾಗೂ‌ ಇತರೆ ಮಾರಾಕಾಸ್ತ್ರಗಳನ್ನು ತೋರಿಸಿ ನಾಲ್ವರು ಕಳ್ಳರು ಎಸ್ಕೆಪ್ ಆಗಿದ್ದಾರೆ. ಅಷ್ಟರಲ್ಲಿ ಮನೆಯಲ್ಲಿದ್ದ ಸುಮಾರು ೨೦ ಗ್ರಾಂ ಬಂಗಾರ ಹಾಗೂ ಇತರೆ ಸಣ್ಣಪುಟ್ಟ ವಸ್ತುಗಳನ್ನು ಕದ್ದೊಯ್ದಿದ್ದಾರೆ.

ನಂತರ ಮನೆ ಮಾಲಿಕ ಬಾಡಿಗೆ ದಾರರಿಗೆ ಫೋನ್ ಮೂಲಕ ತಿಳಿಸಿದ್ದಾರೆ. ನಂತರ ಸ್ಥಳಕ್ಕೆ ಲಕ್ಷ್ಮೇಶ್ವರ ಪೋಲೀಸರು ಭೇಟಿನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply