ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ..?

0

ಬೆಂಗಳೂರು – ನಾಳೆ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರಲಿದ್ದಾರೆ ಎಂದು ರಾಜ್ಯ ಆಮ್ ಆದ್ಮಿ ಪಾರ್ಟಿ ಪತ್ರಿಕೆ ಪ್ರಕಟಣೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ  ಬಿಜೆಪಿ ಪಕ್ಷದ  ಆಂತರಿಕ ಒಳ ಜಗಳಗಳು, ಸ್ವ ಹಿತಾಸಕ್ತಿಯ ರಾಜಕಾರಣ, ಸಾಂವಿಧಾನಿಕ ಅಧಿಕಾರ ದುರ್ಬಳಕೆ, ಕುಟುಂಬ ಭ್ರಷ್ಟಾಚಾರ ಇವೆಲ್ಲವುಗಳಿಂದ ಬೇಸತ್ತಿರುವ ಬಿಜೆಪಿ ಶಾಸಕರು, ಆಮ್ ಆದ್ಮಿ ಪಕ್ಷಕ್ಕೆ  ಸೇರ್ಪಡೆಗೊಳ್ಳುತ್ತಿರುವುದು ಕರ್ನಾಟಕ ರಾಜಕೀಯದಲ್ಲಿ ಒಂದು ಮಹತ್ವದ ಬೆಳವಣಿಗೆಯಾಗಿದೆ.

ಪರ್ಯಾಯ ರಾಜಕಾರಣದ ನಮ್ಮ ಪ್ರಯತ್ನದಲ್ಲಿ ಈ ಬೆಳವಣಿಗೆ ಸಂತಸದ ವಿಷಯವಾಗಿದೆ. ಈ ಮಹತ್ವದ ಕಾರ್ಯಕ್ರಮವು ಜುಲೈ 9, ಶುಕ್ರವಾರದಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ನಡೆಯಲಿದೆ. ಎಂದು ಪತ್ರಿಕಾ ಹೇಳಿಕೆ ನೀಡಿದೆ. ಹೀಗಾಗಿ ನಾಳೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯಾವ ಶಾಸಕರು ಆಮ್ ಆದ್ಮಿ ಸೇರಲಿದ್ದಾರೆ‌ ಎನ್ನುವ ಕುತೂಹಲ ಮೂಡಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply