ಒಂದು ರೂಪಾಯಿ ಪೆಟ್ರೋಲ್ ಹಾಕಿ: ನೂರರ ಗಡಿ ತಲುಪಿದರೇ ಜೀವನ ನಡೆಸುವುದು ಹೇಗೆ…!

0

ಹುಬ್ಬಳ್ಳಿ: ಪೆಟ್ರೋಲ್ ಹಾಗೂ ಡಿಸೇಲ್ ದರ ನೂರರ ಗಡಿ ತಲುಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ಒಂದು ರೂಪಾಯಿ ಪೆಟ್ರೋಲ್ ಹಾಕುವಂತೆ ಒತ್ತಾಯಿಸಿ ವಿನೂತನ ಪ್ರತಿಭಟನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೂ ಕೂಡ ಇಂಧನ ಬೆಲೆಯನ್ನು ಏರಿಕೆ ಮಾಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಜೀವನ ನಿರ್ವಹಣೆಯೇ ಹೊಣೆಯಾಗಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಇಂಧನ ಬೆಲೆ ಏರಿಕೆಯ ಜೊತೆಗೆ ಜನರ ಜೀವನದ ಜೊತೆಗೆ ಆಟ ಆಡುತ್ತಿರುವುದು ಸರಿಯಲ್ಲ ಕೂಡಲೇ ಇಂಧನ ಬೆಲೆಯನ್ನು ಇಳಿಕೆ ಮಾಡುವಂತೆ ಆಗ್ರಹಿಸಿದರು.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply