ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ಪತ್ತೆಯಾದ ಬಾವಿ…!

0

ಮಂಗಳೂರು  – ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ನೆಲಸಮಗೊಂಡಿರುವ ನಗರದ ನವಭಾರತ್ ಸರ್ಕಲಲ್ಲಿ ಹಳೆಯ ಬಾವಿಯೊಂದು ಪತ್ತೆಯಾಗಿದೆ. ಮಂಗಳೂರಿನ ಹೃದಯ ಭಾಗದಲ್ಲಿರುವ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆಯಲ್ಲಿ ಹೊಸದಾಗಿ ನಿರ್ಮಿಸಲು ನಿನ್ನೆ ರಾತ್ರಿ ನೆಲಸಮ ಮಾಡಲಾಗಿತ್ತು. ಇಂದು ಕಾಮಗಾರಿ ಕೆಲಸ ನಡೆಯುತ್ತಿದ್ದ ವೇಳೆ ಸಿಮೆಂಟ್ ಸ್ಲ್ಯಾಬ್ ನ ಕೆಳಗೆ ಬಾವಿಯೊಂದು ಪತ್ತೆಯಾಗಿದೆ.

ಇದು ಸುಮಾರು 20 ವರ್ಷಗಳ ಹಿಂದಿನ ಬಾವಿ ಎಂದು ಅಂದಾಜಿಸಲಾಗಿದೆ. ಬಾವಿಯನ್ನು ಕಾಂಕ್ರಿಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದೆ. ಈ ಹಿಂದೆ ಸ್ಮಾರ್ಟ್ ಸಿಟಿ ಕಾಮಗಾರಿಯ ವೇಳೆ ಹಂಪನಕಟ್ಟೆಯಲ್ಲಿಯೂ ನೂರಾರು ವರ್ಷ ಹಳೆಯದಾದ ಬಾವಿ ಪತ್ತೆಯಾಗಿತ್ತು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply