ತಂದೆಯ ಅಂತ್ಯ ಸಂಸ್ಕಾರ ಮಾಡಿ ಬಂದ ಮಗ ಸಾವು..

0

ಮಂಗಳೂರು- ಕೊರೋನದಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿದ್ದ ಅವರ ಪುತ್ರ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ಎಂಬಲ್ಲಿ ನಡೆದಿದೆ.

ಪುಣಚ ಬೈಲುಗುತ್ತು ಕೊಪ್ಪಳ ನಿವಾಸಿ ಕೆಪಿಟಿ ನಿವೃತ್ತ ಪ್ರೊ. ಭುಜಂಗ ಶೆಟ್ಟಿ ಎಂಬುವವರು ಕೋವಿಡ್‌ನಿಂದ ಮಂಗಳವಾರ ರಾತ್ರಿ ಮೃತಪಟ್ಟಿದ್ದರು. ಅವರ ಅಂತಿಮ ಸಂಸ್ಕಾರವು ಇವತ್ತು ಬೈಲುಗುತ್ತು ಕೊಪ್ಪಳ ನಿವಾಸದಲ್ಲಿ ಕೋವಿಡ್ ನಿಯಮಾವಳಿಯೊಂದಿಗೆ ನಡೆಸಲಾಯಿತು. ಅಂತ್ಯ ಕ್ರಿಯೆಯಲ್ಲಿ ಭಾಗಿಯಾಗಿದ್ದ ಭುಜಂಗ ಶೆಟ್ಟಿಯ ಕಿರಿಯ ಪುತ್ರ ಆಸ್ಟ್ರೇಲಿಯಾದಲ್ಲಿ ಉದ್ಯೋಗದಲ್ಲಿದ್ದ ಶೈಲೇಶ್ ಶೆಟ್ಟಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ತಕ್ಷಣವೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆ ತಲುಪುವ ವೇಳೆಗಾಗಲೇ ಅವರು ನಿಧನರಾಗಿದ್ದಾರೆ.

ಡಿಪ್ಲೋಮಾ ಇನ್ ಮೆಕಾನಿಕಲ್ ಪದವಿ ಮಾಡಿರುವ ಶೈಲೇಶ್ ಹಲವು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ಉನ್ನತ ಉದ್ಯೋಗದಲ್ಲಿದ್ದರು. ಕಳೆದ ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಪುತ್ತೂರು ನಗರದ ಹಾರಾಡಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಮಕ್ಕಳೊಂದಿಗೆ ವಾಸವಾಗಿದ್ದರು

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply