ಮೆಹಂದಿ ಕಾರ್ಯಕ್ರಮ ಮಾಡಿದರವ ಮೇಲೆ ಬಿತ್ತು ಕೇಸ್

0

ಮಂಗಳೂರು  – ಅನುಮತಿ ಇಲ್ಲದೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದವರ ವಿರುದ್ಧ ಕೋವಿಡ್-19 ನಿಯಮ ಉಲ್ಲಂಘಿಸಿದ ಆರೋಪದಡಿ ಮಂಗಳೂರಿನ‌ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ. ಪಾವೂರಿನ ಗ್ರಾಮದ ಶೋಭಾ ಎಂಬುವವರು ಮೇ 20ರಂದು ಕೌಶಲ್ಯ ಎಂಬುವವರ ಮದುವೆಯ ಬಗ್ಗೆ ಗ್ರಾಮ ಪಂಚಾಯತ್ ನಿಂದ ಷರತ್ತುಬದ್ಧ ಅನುಮತಿ ಪಡೆದಿದ್ದರು.

ಆದರೆ ಮೇ 19ರಂದು ರಾತ್ರಿ ಅನುಮತಿ ಇಲ್ಲದೆ ಮೆಹಂದಿ ಕಾರ್ಯಕ್ರಮ ಆಯೋಜಿಸಿ ಧ್ವನಿವರ್ಧಕ ಬಳಸಿ ಯಾವುದೇ ಸುರಕ್ಷಿತ ಅಂತರ ಕಾಪಾಡದೆ, ಮಾಸ್ಕ್ ಧರಿಸದೆ ನೃತ್ಯ ಮಾಡುವ ಮೂಲಕ ಕೋವಿಡ್ 19 ನಿಯಮ ಉಲ್ಲಂಘಿಸಿದ್ದಾರೆ ಎಂದು ಪಾವೂರು ಗ್ರಾಪಂ ಪಿಡಿಒ ಸುಧಾರಾಣಿ ದೂರು ನೀಡಿದ್ದಾರೆ. ಅದರಂತೆ ಕೊಣಾಜೆ ಪೊಲೀಸರು ಕರ್ನಾಟಕ ಎಪಿಡಮಿಕ್ ಕಾಯ್ದೆ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply