14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

0

ಮಂಗಳೂರು  – ಮಹಿಳೆಯೊಬ್ಬರು ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಮನೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕುಲಶೇಖರ ಚೌಕಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪುಷ್ಪಲತಾ ಎಂದು ಗುರುತಿಸಲಾಗಿದೆ.

ಇವರು ಇಂದು ಬೆಳಗ್ಗೆ ಮಂಗಳೂರಿನ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಚೌಕಿಯಲ್ಲಿರುವ ಬಹುಮಹಡಿಗಳ ಅಪಾರ್ಟ್ ಮೆಂಟ್ ವೊಂದರ 14ನೇ ಮಹಡಿಯಲ್ಲಿರುವ ಮನೆಯ ಬಾಲ್ಕನಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಒತ್ತಡ ಸಮಸ್ಯೆಯಿಂದ ಬಳಲುತ್ತಿದ್ದರೆನ್ನಲಾದ ಇವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನ ನಡೆಸಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply