ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ಸಾಂಕೇತಿಕ ಪ್ರತಿಭಟನೆ.

0

ರಾಯಚೂರು – ವೈದ್ಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ ಖಂಡಿಸಿ, ರಾಯಚೂರು ಜಿಲ್ಲೆಯಲ್ಲಿ, ಜಿಲ್ಲಾಧಿಕಾರಿ ಕಚೇರಿ ಮುಂದೆ ಕೈಗೆ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು. ಕೊರೊನಾ ವಿರುದ್ದ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ವೈದ್ಯರ ಮೇಲೆ, ರೋಗಿಗಳ ಸಂಬಂಧಿಕರು ವೈದ್ಯರ ಮೇಲೆ ನಿರಂತರವಾಗಿ ಹಲ್ಲೆ ನಡೆಸುತ್ತಾ ಬಂಧಿರುವುದು ಖಂಡನೀಯ.

ನಮ್ಮ ಸೇವೆಯನ್ನು ನಿಷ್ಠೆಯಿಂದ, ಪ್ರಾಮಾಣಿಕವಾಗಿಯೇ ಮಾಡುತ್ತೇವೆ. ನಮ್ಮ ಕೈಮೀರಿ ರೋಗಿಗಳ ಪ್ರಾಣಕ್ಕೆ ಅಪಾಯ ಉಂಟಾದರೆ ಅದಕ್ಕೆ ನಮ್ಮನ್ನು ಹೊಣೆ ಮಾಡುವ ರೋಗಿಗಳ ಸಂಬಂಧಿಕರು ನಮ್ಮ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾ ನಿರತ ವೈದ್ಯರು ಒತ್ತಾಯಿಸಿದರು. ಹಾಗೂ ಕರೋನಾದಿಂದ ಸಾವನ್ನಪ್ಪಿದ ವೈದ್ಯರನ್ನು, ಕೊರೋನಾ ಹುತಾತ್ಮರು ಎಂದು ಘೋಷಣೆ ಮಾಡಬೇಕು ಎಂದು ಮನವಿ ಸಲ್ಲಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply