ವಿಜಯನಗರ- ಕರೋನಾ ಎರಡನೇ ಅಲೆಯ ಅಬ್ಬರ ಜೋರಾಗಿದ್ದಿ, ವಿಜಯನಗರ ಜಿಲ್ಲೆಯಲ್ಲಿ ಕರೊನಾ ವಿದ್ಯಾರ್ಥಿಗಳೇ ಟಾರ್ಗೆಟ್ ಮಾಡಿದಂತಿದೆ. ಇಂದು ಒಂದೇ ದಿನ 32 ಜನ ವಿದ್ಯಾರ್ಥಿಗಳು ಮತ್ತು ಒಬ್ಬ ಸಿಬ್ಬಂದಿ ಸೇರಿ 33 ಜನರಿಗೆ  ಸೋಂಕು ಧೃಢವಾಗಿದೆ.  ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕಂದಗಲ್ಲು ಗ್ರಾಮದ , ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜ್ ನ ವಿದ್ಯಾರ್ಥಿಗಳಲ್ಲಿ ಕರೊನಾ ಸೋಂಕು ಕಂಡು ಬಂದಿದೆ. SSLC ಯ 9 ವಿದ್ಯಾರ್ಥಿಗಳು, PUCಯ 23  ವಿದ್ಯಾರ್ಥಿಗಳು ಮತ್ತು ಕಾಲೇಜಿನ ಒಬ್ಬ ಸಿಬ್ಬಂದಿಗೆ ಸೋಂಕು ಧೃಡವಾಗಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜ್ ನಲ್ಲಿ ಒಟ್ಟು  120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಈಗ ಆ ಎಲ್ಲಾ  ಮಕ್ಕಳು ಹಾಗೂ ಪಾಲಕರಲ್ಲಿ ಆತಂಖ ಮನೆಮಾಡಿದೆ. ಇನ್ನು  ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿ 200 ಕ್ಕೂ ಅಧಿಕ ಜನ ಪ್ರೈಮರಿ ಮತ್ತು ಸೆಕೆಂಡರಿ ಕಾಂಟೆಕ್ಟ್ ನಲ್ಲಿರೋರಿಗೆ ಕೊವೀಡ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆ ಮುಂದಾಗಿದ್ದು, ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾದ್ಯತೆ ದಟ್ಟವಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply