ಟಾಟಾ ಏಸ್ ಚಾಲಕರನ್ನ ಬೆದರಿಸಿ ಹಣ ದರೋಡೆ: ಆರೋಪಿಗಳ ಬಂಧನ

0

ಹುಬ್ಬಳ್ಳಿ- ನಗರದ ರಿಂಗ್ ರೋಡಲ್ಲಿ ಎರಡು ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ, ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನ ಹುಬ್ಬಳ್ಳಿ ಸೆಟ್ಲಮೆಂಟ್ ಗಂಗಾಧರನಗರದ ವಿಶಾಲ ಕಾಶಿನಾಥ ಬಿಜವಾಡ ಹಾಗೂ ಕರ್ಣ ಮುಂಡಗೋಡ ಎಂದು ಗುರುತಿಸಲಾಗಿದ್ದು, ಪಲ್ಸರ್ ಬೈಕಿನಲ್ಲಿ ಹೋಗಿ ವಾಹನ ಚಾಲಕರನ್ನು ಬೆದರಿಕೆ ಹಾಕಿ ಹಣ ದೋಚುತ್ತಿದ್ದರು ಎನ್ನಲಾಗಿದೆ. ರಿಂಗ್ ರೋಡಲ್ಲಿ ಹೋಗುತ್ತಿದ್ದ ಕೃಷ್ಣಾ ಹಾಗೂ ಫಾರೂಕ ಎಂಬುವವರ ಟಾಟಾ ಏಸ್ ವಾಹನಗಳನ್ನ ನಿಲ್ಲಿಸಿ, 38 ಸಾವಿರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದರು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಂಡಿಗೇರಿ ಠಾಣೆಯ ಪೊಲೀಸರಿಗೆ ಐಟಿಸಿ ಗೋಡೌನ ಬಳಿಯಿರುವ ಸಿಸಿಟಿವಿ ಕ್ಯಾಮರಾಗಳು ಸಾಕ್ಷಿ ಹಿಡಿದು ಹಳಿಯಾಳ ರಸ್ತೆಯಲ್ಲಿ ಸಂಜೆ ಪಾರ್ಟಿ ಮಾಡುತ್ತ ಕುಳಿತ ಸಮಯದಲ್ಲಿ ಪೊಲೀಸರು ಆರೋಪಿಗಳನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply