ಹುಬ್ಬಳ್ಳಿ- ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ನಾಡದ್ರೋಹ ಹೇಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ‌ ಬಣದಿಂದ ಪ್ರತಿಭಟನೆ ನಡೆಸಿದರು. ನಗರದ ಸಂಗೊಳ್ಳಿ ರಾಯಣ್ಣ ವೃತ್ತ ದಲ್ಲಿ ‌ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮಹಾರಾಷ್ಟ್ರ ಸಿಎಂ ವಿರುದ್ದ ಘೋಷಣೆ ಕೂಗಿ ಪ್ರತಿಕೃತಿಗೆ ಚಪ್ಪಲಿ ಸೇವೆ ಮಾಡಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.  ಮುಖ್ಯಮಂತ್ರಿಯಾಗಿದ್ದವರು ಗಡಿ ವಿಚಾರವನ್ನು ಕೆದಕುವ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯನ್ನುಂಟು ಮಾಡಿದ್ದಾರೆ. ಉದ್ದವಠಾಕ್ರೆ ರಾಜ್ಯದ ಜನತೆಯ ಕ್ಷಮೆ ಕೇಳುವಂತೆ ಒತ್ತಾಯಿಸಿದರು.

 

About Author

Priya Bot

Leave A Reply