ಅಧಿಕಾರ ವಹಿಸಿಕೊಂಡ ದಿನವೇ 23.123 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ

0

ನವದೆಹಲಿ – ಮೋದಿ ಸರ್ಕಾರದಲ್ಲಿ ನೂತನ ಆರೋಗ್ಯ ಸಚಿವರಾಗಿ ಮನ್ಸುಖ್ ಮಾಂಡವಿಯಾ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕಾರದ ಮೊದಲ ದಿನವೇ ಅಧಿಕಾರಿಗಳ ಜೊತೆಯಲ್ಲಿ ಸಚಿವರು ಸಭೆ ನಡೆಸಿ ಹಲವಾರು ಯೋಜನೆಯನ್ನು ಜಾರಿಗೆ ತಂದಿದ್ದಾರೆ.

ಕೊರೊನಾ ಸೋಂಕಿನ ನಿರ್ವಹಣೆ ಸಲುವಾಗಿ 23,123 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಮೊಟ್ಟ ಮೊದಲನೆಯದಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಟಕ್ಕೆ 23,123 ಕೋಟಿ ರೂಪಾಯಿ ತುರ್ತು ಪ್ಯಾಕೇಜನ್ನು ಬಿಡುಗಡೆ ಮಾಡುವುದಾಗಿ ಅಧಿಕಾರಿಗಳು ಸಭೆಯಲ್ಲಿ ಹೇಳಿದ್ದಾರೆ.

ತಮ್ಮ ಕಾರ್ಯಾಲಯದಲ್ಲಿ  ಆರೋಗ್ಯ ಸಚಿವರಾಗಿ ಮೊದಲ ಸಭೆ ನಡೆಸಿ, ದೇಶದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಇನ್ನು, ಈ ಪ್ಯಾಕೇಜ್ ನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಣವನ್ನು ಸಮನಾಗಿ ಬಳಸಬಹುದಾಗಿದೆ ಎಂದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

 

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply