ದೇವಳದ ಸ್ನಾನ ಘಟ್ಟವು ಸಂಪೂರ್ಣ ಮುಳುಗಡೆ

0

ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ, ಬಂಟ್ವಾಳ, ಮೂಡಬಿದ್ರೆ, ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದೆ. ಶಿರಾಡಿ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ದೇವಳದ ಸ್ನಾನ ಘಟ್ಟವು ಸಂಪೂರ್ಣ ಮುಳುಗಡೆಯಾಗಿದೆ.

ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಶ್ವಿನಿ, ಗುಂಡ್ಯ ನದಿಗಳಲ್ಲಿ ನೀರಿನ ಮಟ್ಟ ಬಹಳವಾಗಿ ಏರಿಕೆಯಾಗಿದೆ. ಹೀಗಾಗಿ  ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳಿಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply