ಬಿಜೆಪಿ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಬಹುದು…

0

ಬೆಂಗಳೂರು

ಬಿಜೆಪಿ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ರಾಜ್ಯದಲ್ಲಿ  ಪೆಗಾಸಿಸ್ ಗೂಢಾಚಾರ್ಯ ನಡದಿದೆ ಎನ್ನುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ  ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪೆಗಾಸಿಸ್ ಗೂಢಾಚರ್ಯೆಯಲ್ಲಿ‌ ಕೇಂದ್ರ ಸರ್ಕಾರ ಸಿಲುಕಿಕೊಂಡಿದೆ. ಇದು ಮಾನವ ಹಕ್ಕು ಉಲ್ಲಂಘನೆಯಂಥ ಪ್ರಕರಣವಾದರೂ ಇತ್ತೀಚೆಗೆ ಕೇಂದ್ರ ಆಧ್ಯತೆ ಮೇಲೆ ಗೂಢಚರ್ಯೆ ನಡೆಸುತ್ತಿರುವುದು ಗುಟ್ಟೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯಗಳಲ್ಲಿ ಸರ್ಕಾರ ಕೆಡವಿ, ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು.

ನನ್ನ ಮೇಲೆ ಗೂಢಚರ್ಯೆ ನಡೆಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೊನೆಗೆ ನನ್ನ ಮೇಲೆ ಫೋನ್ ಕದ್ದಾಲಿಕೆ ಆರೋಪ ಮಾಡಿತು. ಸಿಬಿಐ ತನಿಖೆ ನಡೆಸಿತು. ಅದಾಗಲೇ ಅಪಮಾರ್ಗದಲ್ಲಿ ಹೆಜ್ಜೆ ಹಾಕಿದ್ದ ಬಿಜೆಪಿ, ನನ್ನ ಮೇಲಿನ ತನಿಖೆ ಮೂಲಕ ಆತ್ಮವಂಚನೆಯಿಂದ ನಡೆದುಕೊಂಡಿದೆ. ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ. ಇದು ಅಪಾಯಕಾರಿ.

ರಾಜಕಾರಣಿಗಳು, ಅಧಿಕಾರಿಗಳು, ಪತ್ರಕರ್ತರು, ಹೋರಾಟಗಾರರ ಮೇಲೆ ಗೂಢಚರ್ಯೆ ನಡೆಸಿರುವ ಬಿಜೆಪಿ ಮುಂದೊಂದು ದಿನ ಅಗತ್ಯಬಿದ್ದಾಗ ಜನರ ವೈಯಕ್ತಿಕ ಬದುಕಿನಲ್ಲಿ ಇಣುಕದು ಎಂಬುದಕ್ಕೆ ಖಚಿತತೆ ಇದೆಯೇ? ಅಂತ ದಿನ ದೂರವಿಲ್ಲ. ಬಿಜೆಪಿ ದಮನಕಾರಿ ನಡೆ ಈಗ ಮಾನವ ಹಕ್ಕುಗಳತ್ತ ಕೇಂದ್ರೀಕೃತವಾಗಿದೆ.  ಬಿಜೆಪಿಯ ಇಂಥ ಕೃತ್ಯಗಳ ಬಗ್ಗೆ ಜನರು ಜಾಗೃತರಾಗಬೇಕು ಎಂದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply