ನವದೆಹಲಿ- 2021-22 ರ ಕೇಂದ್ರ ಬಜೆಟ್ ಮಂಡನೆಯಾಗಿದದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಾಲಾ ಸೀತಾರಮನ್ ಬಜೆಟ್ ಮಂಡನೆ ಮಾಡಿದ್ದಾರೆ. ಆಯೋಗ್ಯ ಕ್ಷೇತ್ರಕ್ಕೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಹೆಚ್ವಿಸುವ ದೃಷ್ಟಿಯಿಂದ ಬಜೆಟ್ ಮಂಡನೆ ಮಾಡಿದ್ದು. ಇನ್ನು ಮುಂದೆ ಚುನಾವಣೆ ನಡೆಯಲಿರುವ ರಾಜ್ಯಗಳ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ, ಕೇರಳ ತಮಿಳು ನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಹೆಚ್ಚಿನ ಅನುದಾನ ನೀಡಿದೆ. ಹೀಗಾಗಿ ಆಯಾ ರಾಜ್ಯಗಳಲ್ಲಿ ಮೆಗಾ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲು ಮುಂದಾಗಿದೆ.

ಕಳೆದ ವರ್ಷ ಘೋಷಣೆ ಮಾಡಿದ ಹಾಗೆ ಭಾರತ ಮಾಲಾ ಯೋಜನೆಯನ್ನು ಮತ್ತಷ್ಟು ವೇಗ ನೀಡಲು ಚಿಂತನೆ ನಡೆಸಿದ್ದು ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲು ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡಿಗೆ ಅನುದಾನವನ್ನು ಪ್ರಕಟಿಸಿದ್ದಾರೆ.

ತಮಿಳುನಾಡಿನಲ್ಲಿ 3,500 ಕಿ.ಮೀ ಕಾರಿಡಾರ್‌, ಕೇರಳಕ್ಕೆ 65 ಸಾವಿರ ಕೋಟಿ ರೂ., ಪಶ್ಚಿಮ ಬಂಗಾಳಕ್ಕೆ 95 ಸಾವಿರ ಕೋಟಿ ರೂ., ಅಸ್ಸಾಂನಲ್ಲಿ ಮುಂದಿನ ಮೂರು ವರ್ಷದಲ್ಲಿ 1,300 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗುವುದು ಎಂದು ಪ್ರಕಟಿಸಿದ್ದಾರೆ.

ನಿರ್ಮಲಾ ಸೀತಾರಾಮನ್‌ ಯೋಜನೆಗಳನ್ನು ಪ್ರಕಟಿಸುತ್ತಿದ್ದಂತೆ ಈಗ ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಇದು ಕೇಂದ್ರ ಬಜೆಟ್‌ ಅಲ್ಲ ರಾಜ್ಯಗಳ ಚುನಾವಣಾ ಬಜೆಟ್‌ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ವ್ಯಕ್ತವಾಗಿದೆ.

About Author

Priya Bot

Leave A Reply