ಚಿಕ್ಕಮಗಳೂರು- ಇಂದು ನಿಧನರಾದ ವಿಧಾನ ಪರಿಷತ್ತಿನ ಉಪಸಭಾಪತಿ ಎಸ್.ಎಲ್.ಧರ್ಮೆಗೌಡ ಅವರ ಪಾರ್ಥಿವ ಶರೀರವನ್ನು ಸಖರಾಯಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರು ಹಾಗೂ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಸೇರಿದಂತೆ ಹಲವಾರು ಗಣ್ಯರು ಪಾರ್ಥಿವ ಶರೀರಕ್ಕೆ ಪುಷ್ಷಗುಚ್ಛ ಇರಿಸಿ ಅಂತಿಮ ದರ್ಶನ ಪಡೆದರು.

About Author

Priya Bot

Leave A Reply