ಮತ್ತೊಂದು ಹಂಪಿಯ ನಿರ್ಮಾಣ ಅಸಾಧ್ಯ

0

ವಿಜನಯಗನರ-  ಪ್ರವಾಸೋದ್ಯಮದ ಅಭಿವೃದ್ದಿಯ ದೃಷ್ಟಿಯಿಂದ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕ್ ಆವರಣದ 250 ಎಕರೆ ಪ್ರದೇಶದಲ್ಲಿ ಥೀಮ್ ಪಾರ್ಕ್, ತ್ರಿ ಸ್ಟಾರ್ ಹೋಟೆಲ್, ವಸತಿ ನಿಲಯ ಹಾಗೂ ಹೆಲಿಕ್ಯಾಪ್ಟರ್ ಲ್ಯಾಂಡ್ ಏರಿಯಾ ಒಳಗೊಂಡಂತೆ ಸರ್ವತೋಮುಖ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ಪರಿಸರ ಮತ್ತು ಜೀವಿ ಶಾಸ್ತ್ರ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರು ಹೇಳಿದ್ದಾರೆ.

ಕಮಲಾಪುರ ಪಟ್ಟಣದ ಮಯೂರ ಭುವನೇಶ್ವರಿ ಹೋಟೆಲ್‍ನಲ್ಲಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಜೊತೆಗೆ  ನಡೆದ ಸಭೆಯಲ್ಲಿ ಅವರು ಮಾತನಾಡಿದ, ಅವರು ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬರುವ ವಿದ್ಯಾರ್ಥಿಗಳು ಉಳಿದಿಕೊಳ್ಳಲು ಒಂದು ವಸತಿ ನಿಲಯವನ್ನು ಜಿಯೋಲಾಜಿಕಲ್ ಪಾರ್ಕ್ ಆವರಣದಲ್ಲಿ ನಿರ್ಮಿಸಲಾಗುವುದು.

ಮತ್ತೊಂದು ಹಂಪಿಯ ನಿರ್ಮಾಣ ಅಸಾಧ್ಯ, ಪ್ರಸ್ತುತ ಇರುವ ಐತಿಹಾಸಿಕ ತಾಣವನ್ನು ರಕ್ಷಣೆ ಮತ್ತು ಅಭಿವೃದ್ಧಿ ಪಡಿಸುವ ಕೆಲಸ ಮಾಡಲಾಗುತ್ತದೆ ಎಂದರು. ಹಂಪಿಯಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ವ್ಯವಸ್ಥೆ ಮಾಡಲಾಗುತ್ತದೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗಿದೆ. ಅಂಜನಾದ್ರಿ ಪ್ರವಾಸಿಗರ ನೆಚ್ಚಿನ ತಾಣವಾಗಿದ್ದು,ಪ್ರತಿನಿತ್ಯ ಹಲಾವರು ಜನ ಪ್ರವಾಸಿಗರು ಬೇಟಿ ನೀಡುತ್ತಾರೆ. ಬೆಟ್ಟಕ್ಕೆ ರೋಪ್ ವೇ ನಿರ್ಮಾಣ, ರಸ್ತೆಗಳ ಅಭಿವೃದ್ಧಿ,ಮೂಲಭೂತ ಸೌಲಭ್ಯ ಒಳಗೊಂಡಂತೆ ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ 500 ಕೋಟಿ ವೆಚ್ಚ ಮಾಡಲಾಗುವುದು ಎಂದು ಅವರು ವಿವರಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

suddinow.comಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply