ಜಾತಿಗಣತಿ ವೆಚ್ಚ ಪೋಲಾಗಬಾರದು

0

ಬೆಂಗಳೂರು –  ಜಾತಿಗಣತಿಗೆ ಸರ್ಕಾರದ ಬೊಕ್ಕಸದಿಂದ ನೂರಾರು ಕೋಟಿ ವೆಚ್ಚ ಮಾಡಲಾಗಿದೆ. ಹೀಗಾಗಿ ಅದು ವ್ಯರ್ಥವಾಗಬಾರದು ಎಂದು ಹಿಂದುಳಿದ ವರ್ಗಗಳ ನಾಯಕರು ನಮ್ಮನ್ನು ಭೇಟಿ ಮಾಡಿ, ಹೇಳಿದ್ದಾರೆ. ಅವರು ಕೇಳುವುದರಲ್ಲಿ ತಪ್ಪಿಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆ ವರದಿಯಲ್ಲಿ ಏನಿದೆಯೋ ಗೊತ್ತಿಲ್ಲ. ಈ ವಿಚಾರದಲ್ಲಿ ನಾನು ಬೇರೆಯವರ ರೀತಿ ಮಾತನಾಡಲು ಸಾಧ್ಯವಿಲ್ಲ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದೇನೆ. ನಾನು, ವಿರೋಧ ಪಕ್ಷದ ನಾಯಕರು ಎಲ್ಲರ ಜತೆ ಚರ್ಚಿಸುತ್ತೇವೆ. ಈ ವಿಚಾರದಲ್ಲಿ ಬಿಜೆಪಿ ನಿಲುವು ಏನು?ಎಂಬುದನ್ನು ಮೊದಲು ನೋಡೋಣ. ಈ ಬಗ್ಗೆ ಪ್ರಶ್ನೆ ಕೇಳಿದಾಗ ನಮಗೆ ಗೊತ್ತೇ ಇಲ್ಲ, ವರದಿ ಸಲ್ಲಿಕೆಯಾಗಿಲ್ಲ ಎಂದಿದ್ದಾರೆ.

ಇದೇ ವೇಳೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮಂಡ್ಯ ಜಿಲ್ಲೆ ಉಸ್ತುವಾರಿ ಮಂತ್ರಿಯಾಗಿದ್ದೆ. ನೀರಾವರಿ ಸಚಿವನಾಗಿಯೂ ಕೆಲಸ ಮಾಡಿದ್ದೆ. ಆಗ ಯಾರೂ ಕೂಡ ಅಕ್ರಮ ಗಣಿಗಾರಿಕೆ ಬಗ್ಗೆ ನನ್ನ ಬಳಿ ಯಾವುದೇ ಪ್ರಸ್ತಾಪ ಮಾಡಿಲ್ಲ. 10-15 ಕಿ.ಮೀ ದೂರದಲ್ಲಿ ಜಲ್ಲಿಕಲ್ಲಿ ಉತ್ಪಾದಿಸುವುದರಿಂದ ಹೆಚ್ಚು ವ್ಯತ್ಯಾಸವೇನೂ ಆಗುವುದಿಲ್ಲ.

ಗಣಿ ಸಚಿವಾಲಯ ಇದೆ, ಇದಕ್ಕೆ ಕೆಲಸದ ವ್ಯಾಪ್ತಿ ಇದೆ. ಭೂ ವಿಜ್ಞಾನ ಇಲಾಖೆ ಇದೆ. ನೂರಾರು ಇಂಜಿನಿಯರ್ ಗಳೂ ಇದ್ದಾರೆ. ಅವರು ನೋಡಿಕೊಳ್ಳುತ್ತಾರೆ. ನಾವು ಅನಗತ್ಯವಾಗಿ ಜನರಲ್ಲಿ ಆತಂಕ ಮೂಡಿಸೋದು ಬೇಡ. ಇಂತಹ ಚಿಲ್ಲರೆ ಪ್ರಚಾರ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಇದು ಸೂಕ್ಷ್ಮ ವಿಚಾರ. ಕೆಆರ್ ಎಸ್ ದೇಶದ ಆಸ್ತಿ. ಅದರ ಬಗ್ಗೆ ಗಾಬರಿ ಹುಟ್ಟಿಸಬಾರದು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply