ಛೋಟಾ ಮುಂಬೈನಲ್ಲಿ ಭೀಕರ ಅಪಘಾತ ಇಬ್ಬರ ದುರ್ಮರಣ

0

ಹುಬ್ಬಳ್ಳಿ

ನಗರದ ಗಬ್ಬೂರು ಬೈಪಾಸ್ ಸಮೀಪದಲ್ಲಿ ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ, ಆಟೋದಲ್ಲಿದ್ದ ಇಬ್ಬರು ದುರ್ಮರಣಕ್ಕೀಡಾದ ಘಟನೆ ಸಂಭವಿಸಿದ್ದು, ರಸ್ತೆಯಲ್ಲಿ ರಕ್ತ ಮಡುವುಗಟ್ಟಿದೆ. ಹುಬ್ಬಳ್ಳಿಯಿಂದ ಹೊರಟಿದ್ದ ಆಟೋಗೆ ಲಾರಿಯು ಡಿಕ್ಕಿ ಹೊಡೆದಿದೆ. ಇದರಿಂದ ಆಟೋದ ಚಾಲಕ ಹಾಗೂ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ದೇಹಗಳೆರಡು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಘಟನೆ ನಡೆಯುತ್ತಿದ್ದ ಹಾಗೇ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಪೊಲೀಸರು ರಸ್ತೆ ಸಂಚಾರವನ್ನ ಸುಗಮಗೊಳಿಸುತ್ತಲೇ ಅಂಬ್ಯುಲೆನ್ಸ್ ಮೂಲಕ ಶವಗಳನ್ನ ಕಿಮ್ಸಗೆ ರವಾನೆ ಮಾಡುತ್ತಿದ್ದಾರೆ. ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಅಪಘಾತದಲ್ಲಿ ಸಾವಿಗೀಡಾದವರ ಮಾಹಿತಿ ಲಭಿಸಬೇಕಿದ್ದು, ಪೊಲೀಸರು ಪ್ರಕರಣದ ಬಗ್ಗೆ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply