ಬೆಂಗಳೂರು – ಅಪಾರ್ಟ್ಮೆಂಟ್ ಒಂದರಲ್ಲಿ ವಿದ್ಯುತ್ ಸ್ಪರ್ಶಿಸಿ ನಾಲ್ಕು ಜನರು ದಾರುಣವಾಗಿ ಸಾವಿಗೀಡಾದ ಘಟನೆ ಬೆಂಗಳೂರಿನ ಹೊರವಲಯ ಆನೇಕಲ್ ನಲ್ಲಿ ನಡೆದಿದೆ ಆನೇಕಲ್ ತಾಲೂಕಿನ ಇಂಡ್ಳಬೆಲೆಯಲ್ಲಿ ಅಪಾರ್ಟ್ಮೆಂಟ್ ಒಂದುರ ಉದ್ಘಾಟನಾ ಸಮಾರಂಭ ನಾಳೆ ನಡೆಯಬೇಕಿತ್ತು. ಈ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಮುಂಭಾಗದಲ್ಲಿ ಲೈಟಿಂಗ್ ಹಾಕಲು ಕಾರ್ಮಿಕರು ಮುದಾಗಿದ್ದರು. ಈ ವೇಳೆಯಲ್ಲಿ ವಿದ್ಯುತ್ ಸ್ಪರ್ಶಿಸಿ ನಾಲ್ಕು ಜನರು ದಾರುಣವಾಗಿ ಸಾವಿಗೀಡಾಗಿದ್ದಾರೆ. ಈ ಸಂಭಂದ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.