ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮಾದ್ಯತೆ

0

ಕಲಬುರಗಿ  -ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಸರ್ಕಾರದÀ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.

ನಗರದ ಎಂ.ಎಸ್.ಕೆ ಮಿಲ್ ವಾಣಿಜ್ಯ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರ ಇವರ ಜಂಟಿ ಅನುದಾನದಡಿಯಲ್ಲಿ 2 ಎಕರೆ ಪ್ರದೇಶದಲ್ಲಿ ಸುಮಾರು 26.30 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ಮಾದರಿಯ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣಕ್ಕೆ ಶನಿವಾರ ಅಡಿಗಲ್ಲು ಹಾಕಿ ಅವರು ಮಾತನಾಡಿದರು.

ಅನ್ನದಾತ ಬೆಳೆದ ಬೆಳೆ ಸೂಕ್ತ ಮಾರುಕಟ್ಟೆ ದೊರಕಬೇಕು ಎಂಬ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಹೂವು ಬೆಳೆಗಾರರಿಗೆ ಹಾಗೂ ತರಕಾರಿ ಮಾರಾಟಗಾರರು ಸೂಕ್ತ ಮಾರುಕಟ್ಟೆ ಸಿಗದೆ ಕಷ್ಟ ಅನುಭವಿಸಿದ್ದರು. ಇದನ್ನರಿತ ಕೇಂದ್ರ ಸರ್ಕಾರ ದೂರದ ಪ್ರದೇಶದಲ್ಲಿಯೂ ತರಕಾರಿ, ಹಣ್ಣುಗಳನ್ನು ಮಾರಾಟ ಮಾಡಲು ಸಾಗಾಣಿಕೆಗೆ “ಕಿಸಾನ್ ರೈಲು” ಯೋಜನೆ ಜಾರಿಗೆ ತಂದಿದ್ದು, ರೈತರಿಗೆ ತುಂಬಾ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ರೈತರ ಆದಾಯ ದ್ವಿಗುಣ ಮಾಡುವ ನಿಟ್ಟಿನಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 20 ಕೊಟಿ ರೂ. ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರದಿಂದ 6.30 ಕೋಟಿ ರೂ. ಹೀಗೆ ಒಟ್ಟು 26.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣ ರಾಜ್ಯದ ಇತಿಹಾಸದಲ್ಲೇ ಮೊದಲ ಕಟ್ಟಡವಾಗಿದ್ದು, ತುಂಬಾ ಸಂತೋಷದಿಂದ ಅಡಿಗಲ್ಲು ನೆರವೇರಿಸಿದ್ದೇನೆ. ಈ ತರಹದ ಮಾದರಿ ತರಕಾರಿ ಮಾರುಕಟ್ಟೆ ನಿರ್ಮಾಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೂ ತರಲಾಗುವುದು ಎಂದರು.

ಕಲಬುರಗಿ ನಗರದ ಕಣ್ಣಿ ಮಾರುಕಟ್ಟೆಯಲ್ಲಿ ಸಿದ್ದಗೊಳ್ಳಲಿರುವ ನೂತನ ಕಾಯಿಪಲ್ಲೆ ಮಾರುಕಟ್ಟೆಯಿಂದ ಈ ಭಾಗದ ರೈತರ ಹಾಗೂ ಜನರ ಬಹುದಿನಗಳ ಕನಸು ನನಸಾಗಲಿದ್ದು, ರಸ್ತೆ ಬದಿಯಲ್ಲಿ ತರಕಾರಿ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದ ಮತ್ತು ಮಳೆಗಾಲದಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದ ರೈತಾಪಿ ವರ್ಗಕ್ಕೆ ಇದರಿಂದ ನೆಮ್ಮದಿ ಸಿಕ್ಕಿದೆ. ರಸ್ತೆಯುದ್ದಕ್ಕು ಜನ ಗುಂಪಾಗಿ ಸೇರುವ ಕಾರಣ ಅಪಘಾತವಾಗುವ ಸಾಧ್ಯತೆಗಳನ್ನು ಮನಗಂಡು ನೂತನ ತರಕಾರಿ ಮಾರುಕಟ್ಟೆ ಸ್ಥಾಪಿಸಲಾಗುತ್ತಿದೆ. ಇದರಿಂದ ಪ್ರದೇಶದಲ್ಲಿನ ಮುಕ್ತ ಸಂಚಾರಕ್ಕೂ ಅನುವಾಗಲಿದೆ ಎಂದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply