ಮುಂಬೈ – ಕರೋನಾ ಸೋಂಕಿತರಾಗಿದ್ದ ಕ್ರಿಕೆಟ್ ದೇವರು ಎಂದು ಖ್ಯಾತಿ ಪಡೆದಿರುವ ಸಚಿನ್ ತೆಂಡೂಲ್ಕರ್ ಅವರು ನಿನ್ನೆ ಸಂಜೆ ಮನಗೆ ಮರಳಿದ್ದಾರೆ. ಕಳೆದ ಮಾರ್ಚ್ 27 ರಂದು ಸಚಿನ್ ಅವರಿಗೆ ಕರೋನಾ ಸೋಂಕುಬ ಇರುವುದು ದೃಢವಾಗಿತ್ತು. ಸೋಂಕು ತಗುಲಿದ ಬಳಿಕ ಸಚಿನ್ ಅವರು ಒಂದು ವಾರಗಳ ಕಾಲ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಸೋಂಕಿನಿಂದ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರು ಏಪ್ರಿಲ್ 2 ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ವೈದ್ಯರು ನೀಡಿದ ಚಿಕಿತ್ಸೆ ಇಂದಾಗಿ ಗುಣಮುಖರಾದ ಸಚಿನ್ ಅವರು ನಿನ್ನೆ ಸಂಜೆ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.  ಈ ಕುರಿತು ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ಬರೆದುಕೊಂಡಿದ್ದು, ಕಳೆದೊಂದು ವರ್ಷಕ್ಕೂ ಹೆಚ್ಚು ಕಾಲದಿಂದ ಕೊರೊನಾ ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡಿರುವ ಆರೋಗ್ಯ ಕಾರ್ಯಕರ್ತರ ಸೇವೆ ಅಭಿನಂದನೀಯ‘ ಎಂದೂ ಉಲ್ಲೇಖಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply