ಸರ್ಕಾರಕ್ಕೆ ಕುಡುಕರೇ ಆಪತ್ಬಾಂಧವರು

0

ಕಳೆದ ಒಂದು ವರ್ಷಗಳಿಂದ ಕರೋನಾ ಹೆಮ್ಮಾರಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಭಾರಿ ನಷ್ಟ ಮಾಡಿದೆ. ಈ‌ ಮಧ್ಯದಲ್ಲಿ ಸರ್ಕಾರದ ಬೊಕ್ಕಸಕ್ಕೆ ಕುಡುಕರು ಭಾರಿ ಮೊತ್ತದ ಸಹಾಯ ಮಾಡಿದ್ದಾರೆ. ಕಾರಣ ಕರೋನಾ ಸಂಕಷ್ಟದ ನಡುವೆಯೂ ಅಬಕಾರಿ ಇಲಾಖೆ ಮಾತ್ರ ಭರ್ಜರಿ  ಗುರಿ ತಲುಪಿ ದಾಖಲೆ ಬರೆದಿದೆ. ಕೋವಿಡ್-19 ಲಾಕ್ ಡೌನ್ ಹೊರತಾಗಿಯೂ ರಾಜ್ಯ ಅಬಕಾರಿ ಇಲಾಖೆಯ ಆದಾಯ ಶೇ.55ರಷ್ಟು ಹೆಚ್ಚಳವಾಗಿದೆ.

ಅಬಕಾರಿ ಇಲಾಖೆ ತನ್ನ ತ್ರೈಮಾಸಿಕ ವರದಿ ಹೊರಬಿದಿದ್ದು,  ಇದರಲ್ಲಿ ಇಲಾಖೆಯ ಆದಾಯ ಶೇ.55ರಷ್ಟು ಹೆಚ್ಚಳವಾಗಿದೆ. ಅಚ್ಚರಿ ಎಂದರೆ ಕಳೆದ 2 ತಿಂಗಳ ಕೋವಿಡ್ ಸಾಂಕ್ರಾಮಿಕದಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಹೇರಲಾಗಿತ್ತು. ಲಾಕ್ ಡೌನ್ ಹೊರತಾಗಿಯೂ ಇಲಾಖೆ ಶೇ.55ರಷ್ಟು ಆದಾಯ ಹೆಚ್ಚಿಸಿಕೊಂಡಿದೆ. ಇದು ಇಲಾಖೆಯ ವಾರ್ಷಿಕ ಆಯವ್ಯಯದ ಗುರಿಗೆ ಸಮೀಪದ್ದಾಗಿದೆ.

ಮೊದಲ ತ್ರೈಮಾಸಿಕ ವರದಿಯಲ್ಲಿ ಇಲಾಖೆ 5,954.07 ಕೋಟಿ ಆದಾಯ ಗಳಿಸಿತ್ತು. ಇದು ಕಳೆದ ವರ್ಷದ ಆದಾಯಕ್ಕಿಂತ 2,122.90ಕೋಟಿ ರೂ ಅಂದರೆ ಶೇ.55ರಷ್ಟು ಹೆಚ್ಚಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply