ಬೆಂಗಳೂರು- ಮಹಾ ಮಾರಿ ಕರೋನಾ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷಗಳಿಂದ ಬಂದ್ ಆಗಿದ್ದ ಶಾಲೆಗಳನ್ನು ಪುಣರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 6 ರಿಂದ 8 ನೇ ತರಗತಿಗಳನ್ನು ಆರಂಭ ಮಾಡಲು ಸರ್ಕಾರ ಮುಂದಾಗಿದೆ. ಇದೇ ಸೋಮವಾರ ದಿಂದ ಸರಕಾರ ಶಾಲೆಗಳನ್ನು ತೆರೆಯಲು ಅನುಮತಿ ನೀಡಿದೆ. ಇಂದು ನಡೆದ ಸಭೆಯಲ್ಲಿ ಶಿಕ್ಷಣ ತಜ್ಞರು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು ಶಾಲೆಗಳ ಅರಂಭಕ್ಕೆ ತಜ್ಞರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇನ್ನು ಒಂದ ರಿಂದ 5 ನೇ ತರಗತಿ ವರೆಗೆ ವಿದ್ಯಾಗಮ ಯೋಜನೆ ಜಾರಿ ಮಾಡಲು ಸಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಒಂದ ರಿಂದ ಐದನೇ ತರಗತಿಯ ವಿದ್ಯಾಗಮ ಜಾರಿ ಮಾಡಿಲಾಗಿದೆ. ರಾಜ್ಯದ ಗಡಿ ರಾಜ್ಯದಲ್ಲಿ ಕರೋನಾ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸಲು ಸೂಚಿಸಲಾಗಿದ್ದು ಕೇರಳದ ಭಾಗದಿಂದ ಬರುವ ಪ್ರತಿಯೊಬ್ಬರ ವಿದ್ಯಾರ್ಥಿ, ಶಿಕ್ಷಕ ಕೋವಿಡ್‌ ಪರೀಕ್ಷೆಗೆ ಒಳಪಡಬೇಕು. ಆ ನೆಗಟಿವ್‌ ವರದಿ ಇದ್ದರೆ ಮಾತ್ರ ತರಗತಿಗೆ ಹಾಜರಾಗಲು ಅನುಮತಿ ನೀಡಲಾಗುವುದು. ಆಯಾ ಶಾಲೆಗಳಲ್ಲಿ ಇರುವ ಕೊಠಡಿಗಳ ಲಭ್ಯತೆ, ವಿದ್ಯಾರ್ಥಿಗಳ ಸಂಖ್ಯೆಯನ್ನು ಅವಲಂಬಿಸಿ, ಪಾಳಿಯಲ್ಲಿ ತರಗತಿ ನಡೆಸಲು ಅವಕಾಶವಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ

About Author

Priya Bot

Leave A Reply