ಬೆಂಗಳೂರು- ‘ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ರಾಜ್ಯದಿಂದ ನಾವು ಹೆಸರುಗಳನ್ನು ಶಿಫಾರಸು ಮಾಡಲಿದ್ದು, ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

‘ಬೆಳಗಾವಿ, ಬಸವ ಕಲ್ಯಾಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಈ ಭಾಗದ ಮುಖಂಡರ ಸಭೆ ಕರೆದು, ಅವರ ಅಭಿಪ್ರಾಯ ಪಡೆದಿದ್ದೇವೆ. ಅನೇಕ ಸಲಹೆಗಳು ಬಂದಿದ್ದು, ನಾನು ಹುಬ್ಬಳ್ಳಿಗೆ ಹೋಗಿ ಬಂದ ಮೇಲೆ ಮಸ್ಕಿ ಸೇರಿದಂತೆ ಮೂರು ಕ್ಷೇತ್ರದ ಅಭ್ಯರ್ಥಿಗಳ ಶಿಫಾರಸ್ಸನ್ನು ದೆಹಲಿಗೆ ಕಳುಹಿಸಿಕೊಡುತ್ತೇವೆ. ಯಾರಿಗೆ ಟಿಕೆಟ್ ನೀಡಬೇಕು ಎಂದು ವರಿಷ್ಠರು ತೀರ್ಮಾನ ಮಾಡುತ್ತಾರೆ. ಅಂತಿಮ ಪಟ್ಟಿಯನ್ನು ನಾನು ಮಾಡುವುದಿಲ್ಲ. ನಾನು ಹೆಸರುಗಳನ್ನು ಶಿಫಾರಸು ಮಾತ್ರ ಮಾಡುತ್ತೇನೆ.

 

About Author

Priya Bot

Leave A Reply