ಗುಜರಾತ್ – ಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಇಂದು ಉದ್ಘಾಟನೆ ಆಗಲಿದೆ. ಗುಜರಾತಿನ ಕರ್ಣಾವತಿಯಲ್ಲಿ (ಅಹ್ಮದಾಬಾದ್) ನಿರ್ಮಿಸಲಾಗಿರುವ ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಮೈದಾನ ಇದಾಗಿದೆ. ಒಟ್ಟು ಒಂದು ಲಕ್ಷ ಹತ್ತು ಸಾವಿರಕ್ಕೂ ಅಧಿಕ ಜನರು ಕುಳಿತು ಕೊಳ್ಳುವ ವ್ಯವಸ್ಥೆ ಇದ್ದು, ಇಂದು ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಉದ್ಘಾಟನೆ ಮಾಡಲಿದ್ದಾರೆ. ಒಟ್ಟು ಕ್ರೀಡಾಂಗಣ ವ 63 ಎಕರೆ ವಿಸ್ತೀರ್ಣ ಹೊಂದಿದ್ದು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಈ ಕ್ರೀಡಾಂಗಣ ನಿರ್ಮಾಣ ಮಾಡಲಾಗಿದೆ.
ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow