ಮಹದಾಯಿ ಹೋರಾಟಕ್ಕೆ ಏಳು ವರ್ಷ

0

ಗದಗ

ಮಲಪ್ರಭಾ ನದಿಗೆ ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ಗದಗ ಜಿಲ್ಲೆಯ ನರಗುಂದ ತಾಲೂಕಿನ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ ಏಳನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಗದಗ ಜಿಲ್ಲೆ‌ ನರಗುಂದ ಪಟ್ಣಣದಲ್ಲಿ ರೈತರ ಮೌನ ಪ್ರತಿಭಟನಾ ರ್ಯಾಲಿ ನಡೆಸಿದರು. ಕೈಗೆ ಕಪ್ಪು ಪಟ್ಟಿ ಧರಿಸಿ‌ ಹಾಗೂ ಕಪ್ಪು‌ಬಾವುಟ ಪ್ರದರ್ಶಿಸಿ  ಇಂದು ಕರಾಳ ದಿನವನವಾಗಿ ಆರಚಣೆ ಮಾಡುತ್ತಿದ್ದಾರೆ.

ರೈತಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದಲ್ಲಿ  ಪ್ರತಿಭಟನೆ ಪಾದಯಾತ್ರೆ ನಡೆಯುತ್ತಿದ್ದು ಬಾಬಾ ಸಾಹೇಬ್ ಬಾವೇ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜೊತೆಗೆ ಕಳಸಾ ಬಂಡೂರಿ ಹೋರಾಟದಲ್ಲಿ ನಿಧಾನರಾದ ರೈತರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು. ನಂತ್ರ ಬಾಬಾ ಸಾಹೇಬ್ ಬಾವೆ ಪುತ್ಥಳಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು. ಇನ್ನು ರ್ಯಾಲಿ ಬಳಿಕ ಹೋರಾಟದ ವೇದಿಕೆಯಲ್ಲಿ ಮುಂದಿನ ಹೋರಾಟದ ರೂಪುರೇಷದ ನಿರ್ಣಯಗಳನ್ನ ಕೈಗೊಳ್ಳಲಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply