ಬೆಳಗಾವಿ- ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಆವರಣದಲ್ಲಿ ತಲವಾರನಿಂದ ಯುವತಿಯನ್ನು ಕೊಚ್ಚಿ‌ ಕೊಲೆ‌ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಯುವತಿಯನ್ನು ಸುಧಾ ಹಡಪದ ಎಂದು ಗುರುತಿಸಲಾಗಿದ್ದು, ಮೂಲತಃ ಬೆಳಗಾವಿ ಜಿಲ್ಲೆಯ  ಬೈಲಹೊಂಗಲ ತಾಲೂಕಿನ ಮೂಗುಬಸವ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಕಳೆದ ಕೆಲ ವರ್ಷಗಳಿಂದ ವಿವಾಹಿತೆಯನ್ನು ಪ್ರೀತ್ಸೆ ಎಂದು ದುಂಬಾಲು ಬಿದ್ದಿದ್ದ ಪಾಗಲ್ ಪ್ರೇಮಿ, ಪ್ರೀತಿಗೆ ನಿರಾಕರಿಸಿದ್ದಕ್ಕೆ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಬಂದು ಹತ್ಯೆ ಮಾಡಿದ್ದಾನೆ. ಕೊಲೆ‌ಮಾಡಿದ ಪಾಗಲ್ ಪ್ರೇಮಿಯನ್ನು  ಆರೋಪಿ ಈರಣ್ಣ ಜಗಜಂಪಿ ಮಾಡಿದ್ದಾನೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆರೋಪಿ ಈರಣ್ಣ ಜಗಜಂಪಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿದ್ದಾನೆ. ಇನ್ನು ಸ್ಥಳಕ್ಕೆ ಪೊಲೀಸ್ರು ಬೇಟಿ ಮಾಡಿ ಪರಿಶೀಲನೆ ನಡೆಸಿದ್ದು ಸುಧಾ ಅವರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್ ಮಾಡಿದ್ದು  ಮರಣೋತ್ತರ ಪರೀಕ್ಷೆ ಕಳಿಸಲಾಗಿದೆ.  ಇನ್ನೂ ಈ ಕುರಿತು ಎಪಿಎಂಸಿ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

Leave A Reply