ಆರ್ ಟಿ ಐ ಕಾರ್ಯಕರ್ತನ ಕೊಲೆ ಹಿಂದೆ ರಾಜಕೀಯದ ಕೈವಾಡ…

0

ವಿಜಯನಗರ

ಮಾಹಿತಿ ಹಕ್ಕು ಕಾರ್ಯಕರ್ತನನ್ನು ರಾಡ್​​​ನಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ‌ ಮಾಡಿದ್ದಾರೆ. ಈ ಧಾರುಣ ಘಟನೆ ವಿಜಯನಗರ ಜಿಲ್ಲೆಯ  ಹರಪನಹಳ್ಳಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಐದು ಗಂಟೆಯ ಸುಮಾರಿಗೆ ಈ ಒಂದು ಘಟನೆ ನಡೆದಿದ್ದು, 

ಮಾಹಿತಿ ಹಕ್ಕು ಕಾರ್ಯಕರ್ತ(ಆರ್‌ಟಿಐ) ಟಿ. ಶ್ರೀಧರ (40) ಕೊಲೆಯಾದ ದುರ್ದೈವಿ. ಪಟ್ಟಣದ ಎಡಿಬಿ ಕಾಲೇಜ್ ಹತ್ತಿರದ ಹೋಟೆಲ್​ನ ಬಳಿ ಟೀ ಕುಡಿಯುತ್ತಿದ್ದ ವೇಳೆ ಅಪರಿಚಿತರು ಬಂದು ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ್ದಾರೆ. ಕಬ್ಬಿಣದ ರಾಡ್ ನಿಂದ ಹೊಡೆದ ಪರಿಣಾಮವಾಗಿ ತೀವ್ರ ರಕ್ತಸ್ರಾವ ಆದ ಕಾರಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 

ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಿದ ವೇಳೆ ವೈದ್ಯರು ಮೃತಪಟ್ಟಿರುವ ಬಗ್ಗೆ ಖಚಿತಪಡಿಸಿದ್ದಾರೆ. ಈ ಹಿಂದೆ ಕಳೆದ ಎರಡು ದಿನಗಳ ಹಿಂದೆ ಅವರ ಪತ್ನಿಗೆ ಪಿಟಿ ಪರಮೇಶ್ವರ ನಾಯಕ್ ಅವರು ಪೋನ್ ಕರೆ ಮಾಡಿ ಧಮ್ಕಿ ಹಾಕಿದ್ದರು ಎನ್ನಲಾಗಿದೆ. ಹೀಗಾಗಿ ಕೊಲೆಯ  ಹಿಂದೆ ಹಲವಾರು ಅನುಮಾನಗಳು ಕಾಡುತ್ತಿವೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply