ಮಂಗಳೂರು  – ಮಂಗಳೂರಿನ ಹೊಯಿಗೆ ಬಜಾರ್ ನ ನೇತ್ರಾವತಿ ನದಿ ತೀರದಲ್ಲಿ ಟೆಂಟ್ ಗಳಲ್ಲಿ ಬದುಕುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳು ಇತ್ತೀಚೆಗೆ ತೌಕ್ತೆ ಚಂಡಮಾರುತದ ಪರಿಣಾಮದಿಂದಾಗಿ ಟೆಂಟ್ ಗಳು ಹಾರಿ ಹೋಗಿ ಹಲವು ಸಮಸ್ಯೆಗಳನ್ನು ಅನುಭವಿಸಿದ್ದರು. ಅಲ್ಲದೇ ಕೊರೋನಾ ರೋಗದ ಈ ಕಾಲಘಟ್ಟದಲ್ಲಿ ಉಂಟಾದ ಸಮಸ್ಯೆ ಮತ್ತು ಲಾಕ್ಡೌನ್ ನಿಂದಾಗಿ ಒಂದೊತ್ತಿನ ಊಟಕ್ಕೂ ಪಡಿತರ ಇಲ್ಲದೆ ಪರದಾಡುತ್ತಿದ್ದ ಈ ಸಮುದಾಯಕ್ಕೆ ಆಹಾರ ಸಾಮಾಗ್ರಿ ಸಹಿತ ಆರ್ಥಿಕ ಪರಿಹಾರ ನೀಡಬೇಕೆಂದು   ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿತ್ತು.

ಈ ಬಗ್ಗೆ ಗಮನಹರಿಸಿದ ದ.ಕ ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ  ಹೊಯಿಗೆಬಜಾರಿನ ಶಿಳ್ಳೆಕ್ಯಾತ ಅಲೆಮಾರಿ ಜನಾಂಗದವರು ವಾಸಿಸುತ್ತಿರುವ ಕ್ಯಾಂಪ್ ಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿದರು. ಶಿಳ್ಳೆಕ್ಯಾತ ಕುಟುಂಬಗಳಿಗೆ ಬೇಕಾಗಿರುವ ಪಡಿತರ ಆಹಾರ ಸಾಮಾಗ್ರಿಗಳನ್ನು ಒದಗಿಸಿಕೊಡಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು. ಅದೇ ರೀತಿ ಸೊಳ್ಳೆ ಪರದೆಗಳನ್ನು ವಿತರಿಸಲು ಹಾಗೂ ಎಲ್ಲರ ಆರೋಗ್ಯ ತಪಾಸಣೆ ನಡೆಸಲು ಸೂಚಿಸಿದರು. ವಸತಿ, ವಿದ್ಯುತ್, ದಾರಿ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಮುಂದಿನ ದಿನ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply