ಬೆಳ್ಳಂ ಬೆಳಿಗ್ಗೆ ಮರಳು ಅಡ್ಡೆಗಳ ಮೇಲೆ ದಾಳಿ

0

ಗದಗ- ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಮರಳು ಅಡ್ಡೆಗಳ ಮೇಲೆ ಬೆಳ್ಳಂ ಬೆಳಿಗ್ಗೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ನಡೆದಿದೆ.ತಾಲೂಕಿನ ತುಂಗಭದ್ರೆ ದಡದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಅಪಾರ ಪ್ರಮಾಣದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಮರಳು ವಶಪಡಿಸಿಕೊಂಡಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಅಧಿಕೃತವಾಗಿ ಪರವಾನಗಿ ಪಡೆದ ಮರಳು ಬ್ಲಾಕ್ ಗಳು ಇದ್ದಾಗಲೂ ಸಹ, ಶಿಂಗಟಾಲೂರ ಮತ್ತು ಸುತ್ತಮುತ್ತಲಿನ ಗ್ರಾಮದ ಕೆಲ ಖದೀಮರು ರಾಜಾರೋಷವಾಗಿ ತುಂಗಭದ್ರೆಯ ಒಡಲು ಬಗೆದು ಅಪಾರ ಪ್ರಮಾಣದಲ್ಲಿ ಮರಳು ಸಂಗ್ರಹ ಮಾಡಿದ್ದರು.

ಈ ಬಗ್ಗೆ ಮಾಹಿತಿ ಆಧರಿಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ರಾಜೇಶ್, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ತಹಸೀಲ್ದಾರ್ ಆಶಪ್ಪ ಪೂಜಾರ ಹಾಗೂ ಪೊಲೀಸ್ ಇಲಾಖೆಯ 50ಕ್ಕೂ ಹೆಚ್ಚು ಸಿಬ್ಬಂದಿ ಸಹಯೋಗದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ, ಕೋಟ್ಯಾಂತರ ರೂ. ಮೌಲ್ಯದ ಮರಳನ್ನು ಶಿಂಗಟಾಲೂರ ಗ್ರಾಮದ ವ್ಯಾಪ್ತಿಯ ಹಲವು ಕಡೆಗಳಲ್ಲಿ ದಾಳಿ ನಡೆಸಿ, ಸುಮಾರು 100 ಟಿಪ್ಪರ್ ಮರಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಸುಂದರೇಶ ಬಾಬು ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಸಹ ದಾಳಿ ನಡೆದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply