ಶಿಕ್ಷಕರನ್ನು ಭಿಕ್ಷುಕರನ್ನಾಗಿ ಮಾಡಿದ  ರಾಜ್ಯ ಸರ್ಕಾರ…?

0

ಮಂಗಳೂರು – ಕೇಂದ್ರ ಮತ್ತು ರಾಜ್ಯ ಸರ್ಕಾರ ಶೈಕ್ಷಣಿಕ ವಿಚಾರದಲ್ಲಿ ಗೊಂದಲದಲ್ಲಿದೆ.  ಶಿಕ್ಷಣ ವಿಚಾರದಲ್ಲಿ ರಾಜ್ಯ ಸರ್ಕಾರದಲ್ಲಿ ಸ್ಪಷ್ಟವಾದ ನಿಲುವು ಇಲ್ಲ. ಹೀಗಾಗಿ ಶಿಕ್ಷಕರನ್ನು ಭಿಕ್ಷುಕರನ್ನಾಗಿ ರಾಜ್ಯ ಸರ್ಕಾರ ಮಾಡಿದೆ ಎಂದು ಮಂಗಳೂರಲ್ಲಿ ಮಾಜಿ ಸಚಿವ ಯುಟಿ ಖಾದರ್ ಹೇಳಿಕೆ ನೀಡಿದ್ದಾರೆ.

ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಕೊರೋನಾ ಲಾಕ್ ಡೌನ್ ಪ್ಯಾಕೇಜ್ ನಲ್ಲಿ ಕೂಡ ಶಿಕ್ಷಕರನ್ನು ಕಡೆಗಣಿಸಲಾಗಿದೆ. ಅನುದಾನ ರಹಿತ ಶಿಕ್ಷಕರಿಗೆ ತಕ್ಷಣ ಅನುದಾನ ಬಿಡುಗಡೆ ಮಾಡಬೇಕು. ಶಿಕ್ಷಣ ಸಚಿವರು ಪ್ರತಿನಿತ್ಯ ಒಂದೊಂದು ಹೇಳಿಕೆಕೊಟ್ಟು ಪೋಷಕರಿಗೆ ಮತ್ತು ಮಕ್ಕಳಿಗೆ ಗೊಂದಲ ಸೃಷ್ಟಿಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ರಾಜ್ಯದಲ್ಲಿ ಪಿಯುಸಿ, ಎಸ್ ಎಸ್ ಎಲ್ ಸಿ ಪರೀಕ್ಷಾ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಅಕಾಡಮಿಕ್ ವಿಚಾರದಲ್ಲಿ ಗೊಂದಲದಲ್ಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಕೋವಿಡ್ ಗಿಂತ ಶಿಕ್ಷಣ ವಿಚಾರದಲ್ಲಿ ಸಾಕಷ್ಟು ಸಮಸ್ಯೆಯಲ್ಲಿದ್ದಾರೆ. ಪರೀಕ್ಷೆಯ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನು ಶಿಕ್ಷಣ ಸಚಿವರು ಕೊಡಬೇಕು ಎಂದು ಆಗ್ರಹಿಸಿದರು. ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಡಿ. ಲಸಿಕೆ ಲಾಜಿಕ್ ಬಗ್ಗೆ ಜನಪ್ರತಿನಿಧಿಗಳು ತಿಳಿದುಕೊಳ್ಳಬೇಕು. ಲಸಿಕೆಗಳ ವಿಚಾರದಲ್ಲಿ ನಾನು ಜನರ ದಾರಿ ತಪ್ಪಿಸಿದ ಉದಾಹರಣೆ ಇದ್ರೆ ರಾಜಕೀಯ ನಿವೃತ್ತಿ ಮಾಡುತ್ತೇನೆ ಎಂದು ಯುಟಿ ಖಾದರ್ ಸವಾಲೆಸೆದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply